ಇಸ್ರೋ ಮಾಜಿ ಅಧ್ಯಕ್ಷ, ವಿಜ್ಞಾನಿ ಡಾ. ಕೆ. ಕಸ್ತೂರಿ ರಂಗನ್ ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಡಾ.ಕೆ. ಕಸ್ತೂರಿ ರಂಗನ್ ಅವರು ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಸುದೀರ್ಘ 9 ವರ್ಷಕ್ಕೂ ಅಧಿಕ ಕಾಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.















ಪಶ್ಚಿಮ ಘಟ್ಟದ ಅಧ್ಯಯನಕ್ಕಾಗಿ ಇವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಮಾಧವ ಗಾಡ್ಗೀಳ್ ಸಮಿತಿ ವರದಿಯ ಕುಂದು ಕೊರತೆಯನ್ನು ನೀಗಿಸಲು ಕಸ್ತೂರಿರಂಗನ್ ಸಮಿತಿಯನ್ನು ನೇಮಿಸಲಾಯಿತು. ಕಸ್ತೂರಿರಂಗನ್ ಸಮಿತಿ ತನ್ನ ವರದಿಯನ್ನು , 2013 ರ ಏಪ್ರಿಲ್ 15 ರಂದು ಸಲ್ಲಿಸಿತ್ತು. ಈಗಲೂ ಕೂಡಾ ಈ ವರದಿಯ ಹೆಸರಿನಲ್ಲಿ ಕಸ್ತೂರಿರಂಗನ್ ಹೆಸರು ನಮ್ಮ ಭಾಗದಲ್ಲೂ ಕೇಳಿಬರುತ್ತಲೇ ಇದೆ.










