ಅರಂತೋಡು ಗ್ರಾಮ ಪಂಚಾಯತ್ ನ 71ನೇ ತಿಂಗಳ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ

0

ಅರಂತೋಡು ಗ್ರಾಮ ಪಂಚಾಯತ್ ನ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛತಾ ಅಭಿಯಾನದ ಅಂಗವಾಗಿ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತೆಯ 71 ತಿಂಗಳ ಕಾರ್ಯಕ್ರಮ ಶ್ರೀ ದುರ್ಗಾಮಾತಾ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಏ 27 ರಂದು ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ದುರ್ಗಾ ಮಾತಾ ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಘನ ಮತ್ತು ದ್ರವ ತ್ಯಾಜ್ಯ ಘಟಕದ ಸಿಬ್ಬಂದಿಗಳು ಮತ್ತು ಊರಿನವರು ಭಾಗವಹಿಸಿದರು.