














ಪ್ರತಿಷ್ಠಿತ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ – ಕೆ.ಎಂ.ಎಫ್ ಮಂಗಳೂರು ಇದರ ನೂತನ ನಿರ್ದೇಶಕರಾಗಿ ಚುನಾಯಿತರಾದ ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಹಾಲಿ ನಿರ್ದೇಶಕ, ಮಾಜಿ ಉಪಾಧ್ಯಕ್ಷ ಹಾಗೂ ಯೇನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಭರತ್ ನೆಕ್ರಾಜೆಯವರಿಗೆ ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಏ. 28ರಂದು ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ, ನಿರ್ದೇಶಕ ಶಿವಪ್ರಸಾದ್ ಮಾದನಮನೆ ಮತ್ತು ಸಿಇಒ ರತನ್ ಕಲ್ಕುದಿ ಅಭಿನಂದನಾ ಮಾತುಗಳನ್ನಾಡಿ ಭವಿಷ್ಯದಲ್ಲಿ ಇನ್ನಷ್ಟು ಪದವಿ ಪುರಸ್ಕಾರ ಒಲಿದು ಬರಲೆಂದು ಶುಭ ಹಾರೈಸಿದರು. ಸಂಘದ ನಿರ್ದೇಶಕರು, ಸಿಬ್ಬಂದಿ ವರ್ಗದವರು, ವಲಯ ಮೇಲ್ವಿಚಾರಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.










