ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿ ಶನಿವಾರ ಅನ್ನ ಸಂತರ್ಪಣೆ ಆರಂಭವಾಗಲಿದ್ದು ಮೇ.3 ರಿಂದ ಆರಂಭವಾಗಲಿರುವುದಾಗಿ ತಿಳಿದು ಬಂದಿದೆ..









ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿ ಶನಿವಾರ ಮಧ್ಯಾಹ್ನ ಅನ್ನ ಸಂತರ್ಪಣೆ ಮರು ಆರಂಭಿಸುವ ಕುರಿತು ದೇವಾಲಯ ವ್ಯವಸ್ಥಾಪನಾ ಸಮಿತಿ ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ಧರಿಸಿದೆ. ವಳಲಂಬೆ ದೇವಸ್ಥಾನದಲ್ಲಿ ಈ ಹಿಂದೆ ಹಲವು ವರ್ಷಗಳ ಕಾಲ ಪ್ರತಿ ಶನಿವಾರ ಅನ್ನ ಸಂತರ್ಪಣೆ ನಡೆದಿತ್ತು. ಕೋರೋನಾ ಸಂದರ್ಭ ಸ್ಥಗಿತವಾಗಿದ್ದ ವ್ಯವಸ್ಥೆಯನ್ನು ಮತ್ತೆ ಮರು ಆರಂಭಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಭಕ್ತಾಧಿಗಳು ಸಹಕರಿಸುವಂತೆ ವ್ಯವಸ್ಥಾಪನಾ ಸಮತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ವಿನಂತಿಸಿದ್ದಾರೆ.










