ಚಾಕುವಿನಿಂದ ಇರಿದು ತಾಯಿಯನ್ನು ಕೊಲೆಗೈದ ಆರೋಪಿಗೆ ೫ ವರ್ಷ ಜೈಲು ಶಿಕ್ಷೆಯನ್ನು ಜಿಲ್ಲಾ ನ್ಯಾಯಾಲಯ ವಿಧಿಸಿದೆ.
ಪುತ್ತೂರು ಕಾಯಿಮಣ ಗ್ರಾಮದ ಅಂಕಜಾಲು ಎಂಬಲ್ಲಿ ಫೆ. ೧೯ ೨೦೧೯ ರಂದು ಆರೋಪಿ ಗೋಪಾಲ@ ಗೋಪಾ ಎಂಬಾತನು ಕ್ಷುಲ್ಲಕ ಕಾರಣಕ್ಕೆ ತನ್ನ ತಾಯಿ ಚಿಂಕು ಎಂಬವರಿಗೆ ಹಲ್ಲೆ ನಡೆಸಿ ಬಳಿಕ ಚಿಕಿತ್ಸೆ ಕೊಡಿಸದ ಪರಿಣಾಮ ಆಕೆಯು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿತನ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕಲಂ ೩೦೪ ಐಪಿಸಿ ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಪ್ರಾರಂಭಿಕ ತನಿಖೆ ನಡೆಸಿದ ಬೆಳ್ಳಾರೆ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿದ್ದ ಈರಯ್ಯ ಡಿ.ಎನ್. ರವರು, ತನಿಖೆ ಮುಂದುವರಿಸಿದ ಆಗಿನ ಸುಳ್ಯ ವೃತ್ತದ ವೃತ್ತ ನಿರೀಕ್ಷಕರಾಗಿದ್ದ ಸತೀಶ್ ಕುಮಾರ್ ಆರ್ ರವರು ತನಿಖೆ ನಡೆಸಿ ಆರೋಪಿಯ ವಿರುದ್ಧ ಸೂಕ್ತ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿತ್ತು.
ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ಶ್ರೀಮತಿ ಜಯಂತಿ ಭಟ್ ರವರು ವಿಚಾರಣೆ ನಡೆಸಿ ವಾದ ಮಂಡಿಸಿರುತ್ತಾರೆ.









ಪ್ರಸ್ತುತ ಆರೋಪಿ ಕೃತ್ಯ ಎಸಗಿರುವುದು ಸಾಬೀತಾಗಿದ್ದು ಮಾನ್ಯ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇದರ ನ್ಯಾಯಾಧೀಶರಾದ ಶ್ರೀಮತಿ ಸರಿತಾ ಡಿ ರವರು ಆರೋಪಿತನಿಗೆ ಐದು ವರ್ಷ ಶಿಕ್ಷೆ ಮತ್ತು ೫೦೦೦ ದಂಡ ದಂಡ ತಪ್ಪಿದಲ್ಲಿ ಮೂರು ತಿಂಗಳ ಸಾಧಾರಣ ಶಿಕ್ಷೆ ವಿಧಿಸಿ ಎ. ೨೯ ರಂದು ತೀರ್ಪು ನೀಡಿದ್ದಾರೆ.










