








ಅರಂತೋಡು ಗ್ರಾಮಕ್ಕೆ ಮೂರು ನಾಲ್ಕು ವರ್ಷದಿಂದ ಖಾಯಂ ಗ್ರಾಮ ಆಡಳಿತಾಧಿಕಾರಿ ಇಲ್ಲದೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ರೈತರಿಗೆ ತುಂಬಾ ತೊಂದರೆಯಾಗುತ್ತಿದೆ. ಈಗಾಗಲೆ 1000 ಗ್ರಾಮ ಆಡಳಿತಾಧಿಕಾರಿ ಹುದ್ಧೆಗೆ ಅಭ್ಯರ್ಥಿಗಳು ನೇಮಕಗೊಂಡಿದ್ದು ಆದ್ಯತೆ ಮೇರೆಗೆ ಅರಂತೋಡು ಗ್ರಾಮಕ್ಕೆ ತಕ್ಷಣ ಆಡಳಿತಾಧಿಕಾರಿಯನ್ನು ನೇಮಕಗೊಳಿಸುವಂತೆ ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರಿಗೆ ಮನವಿ ಸಲ್ಲಿಸಿದ್ದಾರೆ.










