
ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೇ.1 ರಂದು ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮಗಳು ಕೆಮ್ಮಿಂಜೆ ಕಾರ್ತಿಕ್ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
















ಪೂರ್ವಾಹ್ನ 12 ಕಾಯಿ ಗಣಪತಿ ಹವನ, ಆಶ್ಲೇಷ ಬಲಿ, ಶತರುದ್ರಾಭಿಷೇಕ, ಕಲಶಅಭಿಷೇಕ ಹಾಗೂ ತಂಬಿಲ ಸೇವೆಗಳು ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ , ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.











