ಮಂಗಳೂರಿನ ಬಜ್ಪೆ ಪರಿಸರದಲ್ಲಿ ನಿನ್ನೆ ರಾತ್ರಿ ನಡೆದ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ. 5 ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.















ನಿನ್ನೆ ಬಜ್ಪೆ ಪರಿಸರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರಾದ ಸುಹಾಸ್ ಶೆಟ್ಟಿ ಅವರ ಹತ್ಯೆ ತಂಡವೊಂದರಿಂದ ನಡೆದಿತ್ತು. ಎರಡು ವರ್ಷಗಳ ಹಿಂದೆ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಘಟನೆ ಬಳಿಕ ಮಂಗಳೂರಿನ ಸುರತ್ಕಲ್ ನಲ್ಲಿ ಫಾಝಿಲ್ ಎಂಬವರ ಹತ್ಯೆ ನಡೆದಿದ್ದು, ಸುಹಾಸ್ ಶೆಟ್ಟಿ ಈ ಪ್ರಕರಣದ ಆರೋಪಿಯಾಗಿ ಜೈಲಲ್ಲಿದ್ದು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಇಂದು ಜಿಲ್ಲೆಯಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿದೆ










