ದ.ಕ. ಜಿಲ್ಲೆಯಲ್ಲಿ ಮದ್ಯದಂಗಡಿಗಳು ಬಂದ್-ಜಿಲ್ಲಾಧಿಕಾರಿ ಆದೇಶ

0

ಸುಹಾಸ್ ಶೆಟ್ಟಿ ಕೊಲೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದ.ಕ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಮೇ.2ರಿಂದ ಮೇ.3ರ ಬೆಳಗ್ಗೆ 6 ಗಂಟೆಯ ವರೆಗೆ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲೂಕುಗಳಲ್ಲಿ ಮದ್ಯದಂಗಡಿ ಬಂದ್ ಮಾಡುವ ಈ ಆದೇಶ ಅನ್ವಯವಾಗಲಿದೆ. ಜಿಲ್ಲೆಯಲ್ಲಿನ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಎಸ್. ಪಿ. ಈ ಕುರಿತಂತೆ ಪ್ರಸ್ತಾವನೆ ಸಲ್ಲಿಸಿದ ಹಿನ್ನೆಲೆ ಜಿಲ್ಲಾಧಿಕಾರಿಗಳು ಈ ಆದೇಶವನ್ನು ಹೊರಡಿಸಿದ್ದಾರೆ.