ಚಾಂಪಿಯನ್ ಆಗಿ ಮೆರೆದ ಆಳ್ವಾಸ್ ಕಾಲೇಜು ಮೂಡಬಿದಿರೆ ತಂಡ
ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಹಗ್ಗಜಗ್ಗಾಟ ಪಂದ್ಯಾಟವು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ಮೈದಾನದಲ್ಲಿ -ಮೇ ೬ರಂದು ನಡೆಯಿತು. ಪುರುಷರ ಹಾಗೂ ಮಹಿಳೆಯರ ಎರಡೂ ವಿಭಾಗಗಳಲ್ಲೂ ಆಳ್ವಾಸ್ ಕಾಲೇಜು ಮೂಡಬಿದಿರೆ ತಂಡ ವಿಜಯಿಯಾಗಿ ಚಾಂಪಿಯನ್ ಆಗಿ ಮೆರೆಯಿತು.

ಕಾರ್‍ಯಕ್ರಮದ ಉದ್ಘಾಟನೆಯನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ನೆರವೇರಿಸಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಶ್ರೀ ಜೆರಾಲ್ಡ್ ಸಂತೋಷ್ ಡಿಸೋಜ ಪಂದ್ಯಾಟದ ವೀಕ್ಷಕರಾಗಿ ಆಗಮಿಸಿದ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿ ದೈಹಿಕ ಶಿಕ್ಷಣ ನಿರ್ದೆಶಕರಾದ ಸೀತಾರಮ್, ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ ಪ್ರೀತಿ ಕೆ ರಾವ್ , ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉದಯಶಂಕರ್ ಹೆಚ್ ಮೊದಲಾದವರು ಉಪಸ್ಥಿತರಿದ್ದರು.









ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ ಒಟ್ಟು ೧೨ ತಂಡಗಳು ಭಾಗವಹಿಸಿದ್ದವು. ಆಳ್ವಾಸ್ ಕಾಲೇಜು ಮೂಡಬಿದಿರೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ, ಕುಕ್ಕೇ ಶ್ರೀ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಈ ನಾಲ್ಕು ತಂಡಗಳು ಸೆಮಿಫೈನಲ್ ಹಂತದಲ್ಲಿ ಸೆಣಸಾಡಲು ಅರ್ಹತೆ ಪಡೆಯಿತು. ಸೆಮಿಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ಮೂಡಬಿದಿರೆ ತಂಡ , ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡವನ್ನು ಸೋಲಿಸಿ ಫೈನಲ್‌ಗೆ ಪ್ರವೇಶ ಪಡೆಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ತಂಡ, ಕುಕ್ಕೇ ಶ್ರೀ ಮಹಾವಿದ್ಯಾಲಯ ಸುಬ್ರಹ್ಮಣ್ಯ ತಂಡವನ್ನು ಸೋಲಿಸಿ ಫೈನಲ್‌ಗೆ ಪ್ರವೇಶ ಪಡೆಯಿತು. ಫೈನಲ್ ನಲ್ಲಿ ಆಳ್ವಾಸ್ ಕಾಲೆಜು ಮೂಡಬಿದಿರೆ ತಂಡ ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿ ಮೆರೆಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡ ಮೂರನೇ ಸ್ಥಾನ ಪಡೆಯಿತು. ಕುಕ್ಕೇ ಶ್ರೀ ಮಹಾವಿದ್ಯಾಲಯ ಸುಬ್ರಹ್ಮಣ್ಯ ತಂಡ ನಾಲ್ಕನೇ ಸ್ಥಾನಿಯಾಯಿತು.

ಹುಡುಗಿಯರ ವಿಭಾಗದಲ್ಲಿ ಒಟ್ಟು ೯ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಆಳ್ವಾಸ್ ಕಾಲೇಜು ಮೂಡಬಿದಿರೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಈ ನಾಲ್ಕು ತಂಡಗಳು ಸೆಮಿಫೈನಲ್ ಹಂತದಲ್ಲಿ ಸೆಣಸಾಡಲು ಅರ್ಹತೆ ಪಡೆಯಿತು. ಸೆಮಿಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ಮೂಡಬಿದಿರೆ ತಂಡ ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ತಂಡವನ್ನು ಸೋಲಿಸಿ ಫೈನಲ್‌ಗೆ ಪ್ರವೇಶ ಪಡೆಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ತಂಡವನ್ನು ಸೋಲಿಸಿ ಫೈನಲ್ ಹಂತಕ್ಕೆ ತಲುಪಿತು. ಅಂತಿಮವಾಗಿ ಆಳ್ವಾಸ್ ಕಾಲೇಜು ಮೂಡಬಿದಿರೆ ತಂಡ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡ ಎರಡನೇ ಸ್ಥಾನವನ್ನು ಪಡೆಯಿತು.

ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ತಂಡ ಮೂರನೇ ಸ್ಥಾನ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ತಂಡ ನಾಲ್ಕನೇ ಸ್ಥಾನಿಯಾಯಿತು. ಒಟ್ಟು ೨ ಅಂಕಣಗಳಲ್ಲಿ ಪಂದ್ಯಾಟಗಳು ನಿರಂತರವಾಗಿ ನಡೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು. ವೇದಿಕೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ಸಾಹುಲ್ ಹಮೀದ್ ಕುತ್ತಮೊಟ್ಟೆ, ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಸೇಸಪ್ಪ ಗೌಡ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಡಾ ನಿತಿನ್ ಪ್ರಭು, ಪಂದ್ಯಾಟದ ವೀಕ್ಷಕರಾಗಿ ಆಗಮಿಸಿದ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿ ದೈಹಿಕ ಶಿಕ್ಷಣ ನಿರ್ದೆಶಕರಾದ ಸೀತಾರಮ್, ಕಾಲೇಜಿನ ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ ಪ್ರೀತಿ ಕೆ ರಾವ್ , ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉದಯಶಂಕರ್ ಹೆಚ್ ಮೊದಲಾದವರು ಉಪಸ್ಥಿತರಿದ್ದರು. ಕಾರ್‍ಯಕ್ರಮದಲ್ಲಿ ಹಿಂದಿ ಉಪನ್ಯಾಸಕಿ ಶ್ರೀಮತಿ ಸ್ವಾತಿ ಸ್ವಾಗತಿಸಿ, ಇಂಗ್ಲೀಷ್ ಉಪನ್ಯಾಸಕಿ ಅನಿತಾ ವಂದಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಶಿವಾನಂದ ಜಿ ಕಾರ್‍ಯಕ್ರಮ ನಿರೂಪಿಸಿದರು. ಬೆಳ್ಳಾರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೆಶಕರಾದ ರಾಮಚಂದ್ರ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.








