ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಪೂಜೆ
“ಆಪರೇಷನ್ ಸಿಂಧೂರ” ಕಾರ್ಯಾಚರಣೆಯ ಯಶಸ್ವಿ ಹಿನ್ನೆಲೆಯಲ್ಲಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿ ತುಂಬುವ ಸಲುವಾಗಿ
ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವರಲ್ಲಿ ಪ್ರಾರ್ಥಿಸಿ ಸಂಕಲ್ಪದೊಂದಿಗೆ ವಿಶೇಷ ಪೂಜೆಯನ್ನು ಮೇ. 8 ರಂದು ಬೆಳಗ್ಗೆ ಹಮ್ಮಿಕೊಳ್ಳಲಾಯಿತು.









ದೇವಸ್ಥಾನದ ಪ್ರಧಾನ ಅರ್ಚಕ ಶ್ರೀವರ ಪಾಂಗಣ್ಣಾಯರವರು ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್, ವ್ಯವಸ್ಥಾಪನ ಸಮಿತಿ ನಿಕಟಪೂರ್ವ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಸೇರಿದಂತೆ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ಉತ್ಸವ ಸಮಿತಿಯ ಪದಾಧಿಕಾರಿಗಳು, ಸ್ಥಳೀಯ ಭಕ್ತಾದಿಗಳು ಪಾಲ್ಗೊಂಡಿದ್ದರು.










