ಗ್ರಾಮ ಪಂಚಾಯತ್ಗಳಲ್ಲಿ ಖಾಲಿ ಇರುವ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ.೮ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.
ಸುಳ್ಯ ತಾಲೂಕಿನಲ್ಲಿ ಕನಕಮಜಲು ಹಾಗೂ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ. ನಲ್ಲಿ ತೆರವಾಗಿರುವ ಒಂದೊಂದು ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಮೇ.೮ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, ಮೇ.೧೪ ಕೊನೆಯ ದಿನವಾಗಿದೆ. ಮೇ.೧೫ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.








ಮೇ.೧೭ರಂದು ನಾಮಪತ್ರ ವಾಪಸು ಪಡೆಯಲು ಕೊನೆಯ ದಿನವಾಗಿದ್ದು ಮೇ.೨೫ರಂದು ಚುನಾವಣೆ ನಡೆಯುವುದು. ಮೇ. ೨೮ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯುವುದು.
ಕನಕಮಜಲು ಗ್ರಾ.ಪಂ. ಸದಸ್ಯರಾಗಿದ್ದ ರವೀಚಂದ್ರ ಕಾಪಿಲರು ಅಸೌಖ್ಯದಿಂದ ಇತ್ತೀಚೆಗೆ ನಿಧನರಾಗಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯರಾಗಿದ್ದ ಭಾರತಿಯವರು ಗ್ರಾ.ಪಂ. ಸಾಮಾನ್ಯ ಸಭೆಗೆ ಹಾಜರಾಗದೇ ಇದ್ದುದರಿಂದ ಅವರ ಸದಸ್ಯ ಸ್ಥಾನ ತೆರವಾಗಿತ್ತು. ಇದೀಗ ಆ ಎರಡೂ ಸ್ಥಾನಗಳಿಗೂ ಉಪಚುನಾವಣೆ ನಡೆಯಲಿದೆ.










