ಮೊಗರ್ಪಣೆ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಭಾರತೀಯ ಸೈನಿಕರಿಗಾಗಿ ಹಾಗೂ ವಿಶ್ವ ಶಾಂತಿಗಾಗಿ ವಿಶೇಷ ಪ್ರಾರ್ಥನೆ

0

ಮೊಗರ್ಪಣೆ ಮುಹಿಯದ್ದೀನ್ ಜುಮಾ ಮಸ್ಜಿದ್ ನಲ್ಲಿ ಶುಕ್ರವಾರದ ಜುಮಾ ನಮಾಜ್ ಬಳಿಕ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತದ ಸೈನಿಕರ ಹಾಗೂ ಜನ ಸಾಮಾನ್ಯರ ರಕ್ಷಣೆಗಾಗಿ ವಿಶೇಷ ಪ್ರಾರ್ಥನೆಯನ್ನು ನಡೆಸಲಾಯಿತು.

ಸ್ಥಳೀಯ ಮುದರ್ರಿಸ್ ಅಬ್ದುಲ್ ಖಾದರ್ ಸಖಾಫಿ ಅಲ್ ಖಾಮಿಲ್ ರವರು ಪ್ರಾರ್ಥನೆಯನ್ನು ನೆರವೇರಿಸಿ ವಿಶ್ವ ಶಾಂತಿಗಾಗಿ ದುವಾ ನೆರವೇರಿಸಿದರು.

ಈ ಸಂಧರ್ಭದಲ್ಲಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಪದಾಧಿಕಾರಿಗಳು ಸದಸ್ಯರು ಹಾಗೂ ಜಮಾಅತ್ ನಿವಾಸಿ ಗಳು ಉಪಸ್ಥಿತರಿದ್ದರು.