- ಬೆಳ್ಳಾರೆ ಮುಖ್ಯ ರಸ್ತೆಯಲ್ಲಿ ಪೊಲೀಸ್ ಪಥ ಸಂಚಲನ
ಇತ್ತೀಚಿಗೆ ಜಿಲ್ಲೆಯಲ್ಲಿ ಕೆಲವು ಅಹಿತಕರ ಘಟನೆಗಳು ನಡೆದಿರುವ ಹಿನ್ನಲೆಯಲ್ಲಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮೇ 10 ರಂದು ಬೆಳ್ಳಾರೆ ಪೇಟೆಯಲ್ಲಿ ಪಥ ಸಂಚಲನ ನಡೆಯಿತು.















ಬೆಳ್ಳಾರೆ ಕೆಳಗಿನ ಪೇಟೆಯಿಂದ ಆರಂಭಗೊಂಡ ಪಥಸಂಚಲನವು ಮೇಲಿನ ಪೇಟೆವರೆಗೆ ನಡೆಯಿತು.
ಪಥ ಸಂಚಲನದಲ್ಲಿ ಸುಳ್ಯ ಠಾಣೆ, ಬೆಳ್ಳಾರೆ ಠಾಣೆ,ಹಾಗೂ ಹಾಸನ ವಿಭಾಗದ ಕೆ ಎಸ್ ಆರ್ ಪಿ ತುಕಡಿ ಸಿಬ್ಬಂದಿಗಳು ಭಾಗವಹಿಸಿ ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಕಾಪಾಡಿ ಕೊಳ್ಳಲು ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್, ಬೆಳ್ಳಾರೆ ಠಾಣಾ ಎಸ್.ಐ.ಈರಯ್ಯ ದೂಂತೂರು,ಸುಳ್ಯ ಠಾಣಾ ಉಪ ನಿರೀಕ್ಷಕರುಗಳಾದ ಸಂತೋಷ್ ಬಿ ಹಾಗೂ ಬೆಳ್ಳಾರೆ ಠಾಣೆಯ ಎ.ಎಸ್.ಐ ಗಳು, ಪೊಲೀಸ್ ಕಾನ್ಸ್ಟೇಬಲ್ ಗಳು,ಹೆಡ್ ಕಾನ್ಸ್ ಟೇಬಲ್ ಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.










