
ಜಾಲ್ಸೂರು ಶ್ರೀ ಗುರುರಾಘವೇಂದ್ರ ಭಜನಾ ಮಂದಿರದಲ್ಲಿ ವರ್ಷಂಪ್ರತಿಯಂತೆ ನಡೆಯುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಮೇ. 12 ರಂದು ನಡೆಯಿತು.
















ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ದೀಪ ಪ್ರತಿಷ್ಠ ಪೂಜಾ ಪ್ರಾರಂಭ, ವಿಶ್ವಕರ್ಮ ಭಜನಾ ಸಂಘ ಮೂರೂರು ಇದರ ಸದಸ್ಯರಿಂದ ಭಜನೆ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಭಜನಾ ಮಂದಿರದ ಗೌರವಾಧ್ಯಕ್ಷರು, ಅಧ್ಯಕ್ಷರು, ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.











