ಜಾಲ್ಸೂರು ಗ್ರಾಮ ಪಂಚಾಯಿತಿ ವತಿಯಿಂದ ಜಾಲ್ಸೂರಿನ ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟಕ್ಕೆ ನಿರ್ಮಿಸಿಕೊಟ್ಟ ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಕೀಲಿ ಹಸ್ತಾಂತರ ಕಾರ್ಯಕ್ರಮ ಮೇ 12ರಂದು ನಡೆಯಿತು.

ಶಾಸಕಿ ಭಾಗೀರಥಿ ಮುರುಳ್ಯರವರು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೇದಾ ಶೆಟ್ಟಿಯವರಿಗೆ ನೂತನ ಕಟ್ಟಡದ ಕೀ ಅನ್ನು ಹಸ್ತಾಂತರಿಸಿ ಶುಭ ಹಾರೈಸಿದರು.
















ಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಜಾಲ್ಸುರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಆರ್ಭಡ್ಕ, ಮಾಜಿ ಅಧ್ಯಕ್ಷರುಗಳಾದ ಶ್ರೀಮತಿ ತಿರುಮಲೇಶ್ವರಿ ಮರಸಂಕ, ಬಾಬು ಕೆ.ಎಂ, ಪಿ.ಡಿ.ಒ ಚೆನ್ನಪ್ಪ ನಾಯ್ಕ, ಎಂ.ಬಿ.ಕೆ ಸೌಮ್ಯ ಕದಿಕಡ್ಕ, ಎಲ್.ಸಿ.ಆರ್.ಪಿ ಸವಿತಾ ಪೆರುಮುಂಡ, ಕೃಷಿ ಸಖಿ ವಿಜಯ ಕಾಳಮ್ಮನೆ, ಸಂಜೀವಿನಿ ಒಕ್ಕೂಟದ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗ ಮೊದಲಾದವರು ಉಪಸ್ಥಿತರಿದ್ದರು.

ಸಂಜೀವಿನಿ ಸಂಘದ ಸದಸ್ಯರು ಪ್ರಾರ್ಥಿಸಿದರು. ಜಾಲ್ಸುರು ಗ್ರಾಮ ಪಂಚಾಯತ್ ಸಿಬ್ಬಂದಿ ಚಿದಾನಂದ ವಂದಿಸಿದರು.
ಬೆಳಗ್ಗೆ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಶ್ರೀವರ ಪಾಂಗಣ್ಣಾಯರವರ ನೇತೃತ್ವದಲ್ಲಿ ಗಣಹೋಮ ನಡೆಯಿತು.










