ಬೆಳ್ಳಾರೆ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ – 2025 ಸಮಾರೂಪ

0

ಶಿಬಿರಲ್ಲಿ ಭಾಗವಹಿಸಿ ಸಂಭ್ರಮಿಸಿದ ಮಕ್ಕಳು

ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮೇ. 6ರಂದು ಪ್ರಾರಂಭಗೊಂಡು ಮೇ. 12ರಂದು ಸಮಾರೋಪ ಗೊಂಡಿತು.
ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಪಿ.ಎನ್. ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಮಿತಾ ಎಲ್ ರೈ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಮುಖ್ಯ್ಯೊಪಾದ್ಯಾಯರಾದ ಮಾಯಿಲಪ್ಪ ಜಿ, ಸಹ ಶಿಕ್ಷಕ ದಿನೇಶ್ ಮಾಚಾರ್, ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ, ಗ್ರಂಥಪಾಲಕಿ ಶಶಿಕಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದ ಕು. ಶ್ರೇಯಾ ಮತ್ತು ಕು. ಧೃತಿ ಪ್ರಾರ್ಥಿಸಿದರು. ಕು. ಪ್ರತೀಕ್ಷಾ ಸ್ವಾಗತಿಸಿ, ಕು. ಶಿವಾನಿ ವಂದಿಸಿದರು. ಕು. ತನುಶ್ರೀ ಕಾರ್ಯಕ್ರಮ ನಿರೂಪಿಸಿದರು.