ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇವರ ಸಹಭಾಗಿತ್ವದಲ್ಲಿ ಸುಬ್ರಹ್ಮಣ್ಯ ಕಾಲೇಜಿನಲ್ಲಿ ಮೇ.9 ರಿಂದ ಮೇ.11 ರ ವರೆಗೆ ನಡೆದ ರಾಜ್ಯ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ಚಾರಣ ಶಿಬಿರದ ಸಮಾರೋಪ ಸಮಾರಂಭ ಮೇ.11 ರಂದು ನಡೆಯಿತು.

ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ. ಕೆ ಅಧ್ಯಕ್ಷತೆ ವಹಿಸಿದ್ದರು. ಸಮಾರೋಪ ಕಾರ್ಯಕ್ರಮದ ವಿಶೇಷ ಅಭ್ಯಾಗತರಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುl ಭಾಗೀರಥಿ ಮುರುಳ್ಯ ಭಾಗವಹಿಸಿ ಶಿಬಿರಾರ್ಥಿಗಳ ಅನಿಸಿಕೆಯನ್ನು ಆಲಿಸಿ, ಪ್ರಮಾಣ ಪತ್ರ ನೀಡಿ ಮಾತನಾಡಿದರು.















ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಸುಜಾತ ಕಲ್ಲಾಜೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಗೈಡ್ ಆಯುಕ್ತೆ ಶ್ರೀಮತಿ ವಿಮಲ ರಂಗಯ್ಯ ಸ್ವಾಗತಿಸಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ವಂದಿಸಿದರು. ಪಂಜ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉದಯ ಕುಮಾರ್ ರೈ ರವರು ಕಾರ್ಯಕ್ರಮ ನಿರೂಪಿಸಿದರು. ಶಿಬಿರ ನಾಯಕ ದಾಮೋದರ ನೇರಳ, ಕಾಲೇಜಿನ ರೋವರ್ ಲೀಡರ್ ರಾಮ್ ಪ್ರಸಾದ್ ಉಪಸ್ಥಿತರಿದ್ದರು.

ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು, ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳು, ರಾಜ್ಯ ಸಂಸ್ಥೆಯ ಪದಾಧಿಕಾರಿಗಳು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ಸುಬ್ರಹ್ಮಣ್ಯದ ಕೆ ಎಸ್ ಎಸ್ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಸರ್ವಿಸ್ ರೋವರ್ ರೇಂಜರ್ಸ್ ಶಿಬಿರದ ಯಶಸ್ಸಿಗೆ ಸಹಕರಿಸಿದ್ದರು










