ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾ. ಘಟಕದ ವತಿಯಿಂದ ಪತ್ರಕರ್ತರಿಗೆ ಹಾಗೂ ಮನೆಯವರಿಗೆ ಕ್ರೀಡಾಕೂಟ

0

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾ. ಘಟಕದ ವತಿಯಿಂದ ಪತ್ರಕರ್ತರಿಗೆ ಹಾಗೂ ಮನೆಯವರಿಗೆ ಕ್ರೀಡಾಕೂಟವು ಮೇ. 15ರಂದು ಸುಳ್ಯದ ಪ್ರೆಸ್‌ಕ್ಲಬ್ ಆವರಣದಲ್ಲಿ ನಡೆಯಿತು.


ಪ್ರೆಸ್‌ಕ್ಲಬ್ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.
ಪತ್ರಕರ್ತರಿಗೆ ಹಾಗೂ ಅವರ ಮನೆಯವರಿಗೆ ವಿವಿಧ ಕ್ರೀಡಾಸ್ಪರ್ಧೆಗಳನ್ನು ನಡೆಸಲಾಯಿತು.


ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾ. ಘಟಕದ ಅಧ್ಯಕ್ಷೆ ಜಯಶ್ರೀ ಕೊಯಿಂಗೋಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಭವಾನಿ ಎ.ಜಿ. ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.


ಪ್ರೆಸ್ ಕ್ಲಬ್ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ಪ್ರೆಸ್‌ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಹಿರಿಯ ಪತ್ರಕರ್ತ ಜಯಪ್ರಕಾಶ್ ಕುಕ್ಕೆಟ್ಟಿ, ಶ್ರೀನಿಧಿ ಮಹಿಳಾ ಮಂಡಲದ ಮಾಜಿ ಅಧ್ಯಕ್ಷೆ ಶ್ರೀಮತಿ ಜಯಕೃಷ್ಣ ಕಾಯರ್ತೋಡಿ ಗೌರವ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ನಿರ್ದೇಶಕ ಯಶ್ವಿತ್ ಕಾಳಂಮನೆ ಸ್ವಾಗತಿಸಿ, ವಂದಿಸಿದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾ. ಘಟಕದ ಕಾರ್ಯದರ್ಶಿ ಗಣೇಶ್ ಕುಕ್ಕುದಡಿ ಬಹುಮಾನಿತರ ಪಟ್ಟಿ ವಾಚಿಸಿದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾ. ಘಟಕದ ಮಾಜಿ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿವರಾಮ ಕಜೆಮೂಲೆ, ಭಾಗೀಶ್ ಕೆ.ಟಿ. ಸಹಕರಿಸಿದರು.