







ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ “ಸುಸ್ಥಿರ ಕೃಷಿಗಾಗಿ ರೈತ ಸಂಗೋಷ್ಠಿ” ಕಾರ್ಯಕ್ರಮವು ಮೇ.20 ರಂದು ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ರಾಮಕೃಷ್ಣ ಭಟ್ ಕುರುಂಬುಡೇಲು ಸಭಾಧ್ಯಕ್ಷತೆ ವಹಿಸಲಿದ್ದಾರೆ.
ಇಂದೋರ್ ನ ಶ್ರೀ ಸಿದ್ಧಿ ಅಗ್ರಿ ಕೋಂ ಪ್ರೈವೇಟ್ ಲಿಮಿಟೆಡ್ ನ ಪೆರುವೋಡಿ ನಾರಾಯಣ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಲಿದ್ದಾರೆ.
ಮಂಗಳೂರು ತೋಟಗಾರಿಕಾ ಇಲಾಖೆ ಉಪನಿರ್ದೇಶಕರಾದ ಮಂಜುನಾಥ ಡಿ .ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.










