














ಸುಳ್ಯದ ಸಿ.ಎ.ಬ್ಯಾಂಕಿನ ಸಭಾಭವನದಲ್ಲಿ ನಡೆಯಲಿರುವ ಸಹಕಾರಿಗಳ ಸಮಾವೇಶಕ್ಕೆ ಹಾಗೂ ಜಯನಗರದ ಕೊರಂಬಡ್ಕ ಕೊರಗಜ್ಜ ದೈವದ ನೇಮೋತ್ಸವದಲ್ಲಿ ಭಾಗವಹಿಸಲಿರುವ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರವರು ಆಗಮಿಸಿದರು.

ಈ ಸಂದರ್ಭದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕಿ ಕು.ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ,
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ,ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಮತ್ತಿತರ ನಾಯಕರು ಜತೆಯಲ್ಲಿದ್ದರು.










