ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸುಸ್ಥಿರ ಕೃಷಿಗಾಗಿ ರೈತ ಸಂಗೋಷ್ಠಿ ಕಾರ್ಯಕ್ರಮವು ಮೇ.20 ರಂದು ಸಂಘದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ರಾಮಕೃಷ್ಣ ಭಟ್ ಕುರುಂಬುಡೇಲುರವರು ದೀಪ ಬೆಳಗಿಸಿ ಉದ್ಘಾಟಿಸಿದರು.
















ಬಳಿಕ ಪ್ರಾಸ್ತಾವಿಕವಾಗಿ ಮಾತನಾಡಿ ಇಂದು ಕೃಷಿಕರಿಗೆ ಹಲವಾರು ಸವಾಲುಗಳಿವೆ.
ಎಲ್ಲಾ ರೈತ ಸದಸ್ಯರಿಗೆ ಪ್ರಯೋಜನವಾಗುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಇಂದೋರ್ ನ ಶ್ರೀ ಸಿದ್ಧಿ ಅಗ್ರಿ ಕೋಂ ಪ್ರೈವೇಟ್ ಲಿಮಿಟೆಡ್ ನ ಪೆರುವೋಡಿ ನಾರಾಯಣ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ರೈತರು ಮಣ್ಣಿನಲ್ಲಿರುವ ಕುಂದುಕೊರತೆಗಳನ್ನು ಕಂಡು ಹಿಡಿದುಕೊಂಡು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು.ಕೃಷಿಗೆ ಮಣ್ಣಿನ ರಸ ಸಾರ ಮುಖ್ಯವಾದುದು.ಉತ್ತಮ ರೀತಿಯ ಪಿಎಚ್ ಮಣ್ಣಿನಲ್ಲಿ ಇದ್ದರೆ ಮಾತ್ರ ಉತ್ತಮ ಕೃಷಿ ಉತ್ಪಾದನೆ ಸಾಧ್ಯ ಎಂದು ಹೇಳಿದರು.

ಪ್ರತಿಯೊಬ್ಬ ಕೃಷಿಕನೂ ಮಣ್ಣಿನ ಪರೀಕ್ಷೆ ಮಾಡಿಕೊಂಡು ಸರಿಯಾದ ಪ್ರಮಾಣದಲ್ಲಿ ಗಿಡಗಳಿಗೆ ಗೊಬ್ಬರ ನೀಡಬೇಕು ಎಂದು ಅವರು ಹೇಳಿದರು.
ಮಂಗಳೂರು ತೋಟಗಾರಿಕಾ ಇಲಾಖೆ ಉಪನಿರ್ದೇಶಕರಾದ ಮಂಜುನಾಥ ಡಿ ಯವರು ಕೃಷಿ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಮಾಜಿ ಅಧ್ಯಕ್ಷ ಶ್ರೀರಾಮ ಪಾಟಾಜೆ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುನಂದ ಆಳ್ವ ಉಪಸ್ಥಿತರಿದ್ದರು.
ಸಂಘದ ನಿರ್ದೇಶಕ ನಾರಾಯಣ ಕೊಂಡೆಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.










