ರಸ್ತೆಯ ಹೊಂಡ ಗುಂಡಿಗಳಲ್ಲಿ ಮಳೆ ನೀರು ತುಂಬಿ ವಾಹನ ಸಾವಾರರ ಹಾಗೂ ಪಾದಚಾರಿಗಳ ಪರದಾಟ
ಹಿಡಿಶಾಪ ಹಾಕುತ್ತಿರುವ ಜನಸಾಮಾನ್ಯರು

ಸುಳ್ಯ ನಗರದ ಬಹುತೇಕ ವಾರ್ಡ್ಗಳಲ್ಲಿ ಮತ್ತು ಮುಖ್ಯ ಬೀದಿಗಳಲ್ಲಿ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ನಡೆದಾಡದಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ರಸ್ತೆಯ ಮೇಲ್ಭಾಗದಿಂದ ಹರಿದು ಬರುತ್ತಿರುವ ಮಣ್ಣುಗಳು ಮುಖ್ಯರಸ್ತೆಯನ್ನು ಸೇರುತ್ತಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆಯವರ ಗಮನಕ್ಕೆ ತಂದರೂ ಕೂಡ ಯಾವುದೇ ಪ್ರಯೋಜನ ಬಾರದೆ ಶ್ರೀರಾಂಪೇಟೆ ಬಳಿ ಅಂಗಡಿಯವರೇ ಮಣ್ಣನ್ನು ತೆರೆವುಗೊಳಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.









ಅಲ್ಲದೆ ಪ್ರತಿಯೊಂದು ವಾರ್ಡ್‌ಗಳಲ್ಲಿ ನೀರಿನ ಪೈಪಿಗೆ ಅಳವಡಿಸಲು ತೆಗೆದಿರುವ ಗುಂಡಿಗಳಲ್ಲಿ ರಸ್ತೆಗಳು ಹೊಂಡ ಗುಂಡಿಗಳಿಂದ ತುಂಬಿ ಪರಿಸರ ಸಂಕಷ್ಟದ ಗೂಡಾಗಿದೆ.

ಈ ಎಲ್ಲಾ ಸಮಸ್ಯೆಗಳಿಂದ ಕಂಗೆಟ್ಟಿರುವ ಜನಸಾಮಾನ್ಯರು ಸ್ಥಳೀಯ ಆಡಳಿತಕ್ಕೆ ಹಿಡಿ ಶಾಪವನ್ನು ಹಾಕುತ್ತಿದ್ದಾರೆ. ಮುಂದೆ ಮಳೆಗಾಲದಲ್ಲಿ ಉಂಟಾಗ ಬಹುದಾದ ಸಮಸ್ಯೆಗಳ ಬಗ್ಗೆ ಪರಸ್ಪರ ಮಾತಾಡಿ ಕೊಳ್ಳುತ್ತಿದ್ದಾರೆ.










