ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಬಲಗೈಬಂಟ ಕಾಚು ಕುಜುಂಬ ದೈವದ ಮೂಲಸ್ಥಾನ ಗರಡಿ ಬೈಲು ನಲ್ಲಿ ಶ್ರೀ ಕಾಚು ಕುಜುಂಬ ದೈವದ ನೂತನ ದೈವಸ್ಥಾನ ನಿರ್ಮಾಣಕ್ಕೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ಮಾರ್ಗದರ್ಶನದಲ್ಲಿ ಹಾಗೂ ಕ್ಷೇತ್ರದ ವಾಸ್ತು ಶಿಲ್ಪಿಗಳಾದ ಪ್ರಸಾದ್ ಮುನಿಯಂಗಳ ಇವರ ನಿರ್ದೇಶದಂತೆ ಮೇ. 21 ರಂದು ನಡೆಯಿತು.









ದೇವಳದ ಪ್ರಧಾನ ಅರ್ಚಕ ರಾಮಚಂದ್ರ ಭಟ್ ಭೂಮಿ ಪೂಜೆ ನೆರವೇರಿಸಿದರು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಅರ್ಚಕರು ಶಿಲಾನ್ಯಾಸ ನೆರವೇರಿಸಿದರು.
ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ ಬಳ್ಪ, ಧರ್ಮಣ್ಣ ನಾಯ್ಕ ಗರಡಿ ,ಧರ್ಮಪಾಲ ಗೌಡ ಕಾಚಿಲ ಮರಕ್ಕಡ ,ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ,ಶ್ರೀಮತಿ ಪವಿತ್ರ ಮಲ್ಲೆಟ್ಟಿ , ಶ್ರೀಮತಿ ಮಾಲಿನಿ ಕುದ್ವ, ಮಾಜಿ ಸದಸ್ಯ ಬಾಲಕೃಷ್ಣ ಕುದ್ವ ,ಪೈಂದೋಡಿ ಶ್ರೀ ಸುಬ್ರಾಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ವ, ರಮೇಶ್ ನೆಗರಗುಂಡಿ, ದೈವಗಳ ಪರಿಚಾರಕರಾದ ಸದಾಶಿವ ಸಂಪ, ವೆಂಕಟ್ರಮಣ ಪೆರ್ಮಾಜೆ, ರತ್ನಾಕರ ಕಜೆ, ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.










