
ಬೆಂಗಳೂರು, ಚಿತ್ರದುರ್ಗ, ಗುಲ್ಬರ್ಗ ದಲ್ಲಿ ಸಜ್ಜನ ಪ್ರತಿಷ್ಠಾನದ ಸಹಕಾರ ದೊಂದಿಗೆ ಮಕ್ಕಳಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು ಮಕ್ಕಳ ಜ್ಞಾನ ಬೆಳವಣಿಗೆ ನಿಟ್ಟಿನಲ್ಲಿ ಸಾಮಾನ್ಯ ಜ್ಞಾನ ಸ್ಪರ್ಧೆ ಹಾಗೂ ಬೆಂಗಳೂರಿನ ವಿಶೇಷ ಚೇತನ ಮಕ್ಕಳ ಶಾಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಿ ಅದರ ಬಾಗವಾಗಿ ಸುಳ್ಯದಲ್ಲಿ ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಸುಳ್ಯ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಎಂ ಬಿ ಫೌಂಡೇಶನ್ ಸಹಕಾರದೊಂದಿಗೆ ಸುಳ್ಯದಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರಕ ಅರಳುಮಲ್ಲಿಗೆ ಕಾರ್ಯಕ್ರಮದಲ್ಲಿ ಸಜ್ಜನ ಪ್ರತಿಷ್ಠಾನದ ವತಿಯಿಂದ ಚಿಣ್ಣರೊಂದಿಗೆ ನಾವು ಎಂಬ ಧ್ಯೇಯದಡಿಯಲ್ಲಿ ಸರಳ ತರಬೇತಿ ಶಿಬಿರ ಮಾಡಿದರು.
















ಸಜ್ಜನ ಪ್ರತಿಷ್ಠಾನ ದ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ ಮಕ್ಕಳಿಗೆ ಪ್ರಾಮಾಣಿಕತೆ ಮತ್ತು ಪ್ರಯತ್ನ ಎಂಬ ವಿಷಯವನ್ನು ಮಕ್ಕಳಿಗೆ ಮನದಟ್ಟಾಗುವ ಶೈಲಿಯಲ್ಲಿ ತರಭೇತಿ ನೀಡಿದರು.

ಮಕ್ಕಳಿಗೆ ಕೆಲವು ಸ್ಪರ್ಧೆಗಳನ್ನು ಆಯೋಜಿಸಿದ್ದರು ಅದರಲ್ಲಿ ವಿಜೇತ ಮಕ್ಕಳಿಗೆ ಮತ್ತು ಪ್ರಾಮಾಣಿಕತೆಯನ್ನು ತೋರ್ಪಡಿಸಿದ ಮಕ್ಕಳಿಗೆ ಬಹುಮಾನ ವಿತರಿಸಿದರು.
ಸಜ್ಜನ ಪ್ರತಿಷ್ಠಾನದ ವತಿಯಿಂದ ಮಕ್ಕಳಿಗೆ ಪೆನ್ಸಿಲ್ ಬಾಕ್ಸ್ ಕಿಟ್,ಕಲರ್ ಪೆನ್ಸಿಲ್ ಕಿಟ್ ಹಾಗೂ ಸಿಹಿತಿಂಡಿ ಮಕ್ಕಳನ್ನು ಮನರಂಜಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಶ್ರೀಮತಿ ಶೈಲಜಾ,ಸಜ್ಜನ ಪ್ರತಿಷ್ಠಾನ ನಿರ್ದೇಶಕಿ ಶ್ರೀಮತಿ ಮುಬಿನಾ ಉಮ್ಮರ್,ನಿರ್ದೇಶಕ ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಸಜ್ಜನ ಪ್ರತಿಷ್ಠಾನ ನಿರ್ದೇಶಕ ಮಂಜುನಾಥ್ ಹಿರಿಯೂರು ಮೊದಲಾದವರು ಉಪಸ್ಥಿತರಿದ್ದರು.



