ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಜೇನು ಸೊಸೈಟಿ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಲೋಕಾರ್ಪಣೆ

0

ಗುಣಮಟ್ಟದ ಜೇನು ಉತ್ಪಾದನೆಯಿಂದ ಜೇನು ಕೃಷಿ ಅಭಿವೃದ್ಧಿ – ಶೋಭಾ ಕರಂದ್ಲಾಜೆ

ಜೇನು ಕೃಷಿಗೆ ವಿಮೆ,ಬೆಳೆಸಾಲ ನೀಡಲು ಚಿಂತನೆ – ಡಾ.ಎಂ.ಎನ್.ರಾಜೇಂದ್ರ ಕುಮಾರ್

ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು,
ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿರುವ
ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಹಾಗೂ ಜೇನು ಚಾಕೋಲೆಟ್ ನ
ಲೋಕಾರ್ಪಣೆ ಸಮಾರಂಭವು ಮೇ.23 ರಂದು ಸುಳ್ಯದ ಶಾಸ್ತ್ರೀ ವೃತ್ತದಲ್ಲಿರುವ ಅಮೃತ ಭವನದಲ್ಲಿ ನಡೆಯಿತು.
ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ನೂತನ ಕಟ್ಟಡವನ್ನು ಉದ್ಘಾಟಿಸಿದರು.
ನೂತನ ಸಂಸ್ಕರಣಾ ಘಟಕವನ್ನು
ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.


ಸಹಕಾರ ರತ್ನ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಜೇನು ಚಾಕಲೇಟ್ ಲೋಕಾರ್ಪಣೆ ಮಾಡಿದರು.
ಸಹಕಾರ ರತ್ನ , ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಅಧ್ಯಕ್ಷ ಚಂದ್ರ ಕೋಲ್ಚಾರು ಸಭಾಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು.


ಸನ್ಮಾನ


ಬೆಂಗಳೂರಿನಲ್ಲಿ ಜೇನು ಚಾಕಲೇಟ್ ಉತ್ಪಾದನೆ ಮಾಡಯತ್ತಿರುವ ಪ್ರಶಾಂತ್ ದಂಪತಿಗಳನ್ನು ಸನ್ಮಾನಿಸಲಾಯಿತು.
ಸಂಘದ ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡಿದ ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ರವರನ್ನು ಸನ್ಮಾನಿಸಲಾಯಿತು.
ಸಹಕರಿಸಿದವರಿಗೆ ಗೌರವಾರ್ಪಣೆ ನಡೆಯಿತು.


ಸಂಘವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಸಂಘದ ಅಧ್ಯಕ್ಷ ಚಂದ್ರಕೋಲ್ಚಾರ್ ರವರನ್ನು ಶಾಲು,ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಸಚಿವೆ ಶೋಭಾ ಕರಂದ್ಲಾಜೆಯವರು ಸನ್ಮಾನಿಸಿದರು.


ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ
ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಾಫ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ದ.ಕ.ಜೇನು ವ್ಯವಸಾಯಗಾರರ ಸಂಘದ ಉಪಾಧ್ಯಕ್ಷ ರಾಜಾರಾಮ ಶೆಟ್ಟಿ,ವ್ಯವಸ್ಥಾಪನಾ ನಿರ್ದೇಶಕ ತಿಮ್ಮಯ್ಯ ಪಿ, ನಿರ್ದೇಶಕರಾದ ಜಿ.ಪಿ.ಶ್ಯಾಮ ಭಟ್ಟ,ಡಿ.ತನಿಯಪ್ಪ, ಶ್ರೀಷ ಕೊಡವೂರು,ಎಚ್.ಸುಂದರ ಗೌಡ,ಶ್ರೀಮತಿ ಇಂದಿರಾ ಕೆ,ಪಾಂಡುರಂಗ ಹೆಗ್ಡೆ, ಹರೀಶ್ ಕೋಡ್ಲ,ಪುರುಷೋತ್ತಮ ಭಟ್ ಎಂ , ಶಿವಾನಂದ,ಮನೋಹರ,ಜನಾರ್ದನ ಚೂಂತಾರು,ಪುಟ್ಟಣ್ಣ ಗೌಡ ಕೆ,ಗೋವಿಂದ ಭಟ್ ಪಿ,ಶಂಕರ ಪಿ, ಶ್ರೀಮತಿ ಸರಸ್ವತಿ, ಶ್ರೀಮತಿ ಸುಶೀಲ ಉಪಸ್ಥಿತರಿದ್ದರು.
ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.