ಆಂಬುಲೆನ್ಸ್ ಚಾಲಕ ಮಾಲಕ ಸಂಘದ ವತಿಯಿಂದ ಅಧಿಕಾರಿಗಳಿಗೆ ಮನವಿ
ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ಗಾಂಧಿನಗರದಲ್ಲಿ ರಸ್ತೆ ಅಗೆದು ಉಂಟಾಗಿರುವ ಗುಂಡಿಗಳ ಸಮಸ್ಯೆ ಹಾಗೂ ಮಾಣಿ -ಮೈಸೂರು ಟೋಲ್ ಗೇಟ್ ಸಮಸ್ಯೆ, ಹಾಗೆ ಮಾಣಿ ಮೈಸೂರು ರಸ್ತೆ ಕಾಮಗಾರಿ ಇಂದ ವಾಹನ ಸಂಚಾರಕ್ಕೆ ತೊಂದರೆ ಹೀಗೆ ಇನ್ನೂ ಕೆಲವು ಸಮಸ್ಯೆಗಳಿಂದ ರೋಗಿಗಳನ್ನು ಆಂಬುಲೆನ್ಸ್ ವಾಹನದಲ್ಲಿ ಕರೆದುಕೊಂಡು ಹೋಗಲು ಸಾಧ್ಯವಾಗುತಿಲ್ಲ.
















ಆದ್ದರಿಂದ ಈ ಎಲ್ಲಾ ಸಮಸ್ಯೆಗೆ ಸ್ಪಂದಿಸಿ ಕೂಡಲೇ ರಸ್ತೆ ದುರಸ್ಥಿ ಮಾಡಬೇಕೆಂದು ಆಗ್ರಹಿಸಿ ಸುಳ್ಯ ತಾಲೂಕು ಆಂಬ್ಯುಲೆನ್ಸ್ ಚಾಲಕರ ಮಾಲಕರ ಸಂಘದ ಸದಸ್ಯರು ಮೇ 23 ರಂದು ಮಂಗಳೂರು ಜಿಲ್ಲಾಧಿಕಾರಿಯವರಿಗೆ ಮತ್ತು ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿಗೆ ಮನವಿ ನೀಡಿ ವಿನಂತಿಸಿ ಕ್ಕೊಂಡಿದ್ದಾರೆ.
ಮನವಿ ಸ್ವೀಕರಿಸಿರುವ ಅಧಿಕಾರಿಗಳು ಶೀಘ್ರದಲ್ಲಿ ಸ್ಪಂದಿಸುವುದಾಗಿ ಭರವಸೆ ಯನ್ನು ನೀಡಿರುತ್ತಾರೆ ಎಂದು ತಿಳಿದು ಬಂದಿದೆ.
ಮನವಿಗೆ ಸ್ಪಂದನೆ ನೀಡದೇ ಹೋದಲ್ಲಿ ಸಂಘಟನೆ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಸಿದಿದ್ದಾರೆ.










