ಪ್ರಮೋದ್ ಕುಮಾರ್ ರೈ ಬೆಳ್ಳಾರೆಯವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮೇ. 22ರಂದು ಬೆಂಗಳೂರಿನಲ್ಲಿ ನಡೆಯಿತು.















ಕಳೆದ ಮೂರು ದಶಕಗಳಿಂದ ನೃತ್ಯ ಕಲಾವಿದರಾಗಿ, ನಿರ್ದೇಶಕರಾಗಿ, ವಸ್ತ್ರ ವಿನ್ಯಾಸ ಸೇರಿದಂತೆ ವಿವಿಧ ಆಯಾಮಗಳಲ್ಲಿ ನಿರಂತರವಾಗಿ ರಂಗಸೇವೆ ಸಲ್ಲಿಸಿತ್ತಾ ಬಂದಿರುವ, ಹಲವು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿಗಳನ್ನು ಪಡೆದಿರುವ ಬೆಳ್ಳಾರೆಯ ಕಲಾಮಂದಿರ್ ನಿರ್ದೇಶಕ ಪ್ರಮೋದ್ ಕುಮಾರ್ ರೈ ಅವರಿಗೆ 50ನೇ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಈ ವರ್ಷದ ಆರ್ಯಭಟ ಸುವರ್ಣ ಸಂಭ್ರಮ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾಟಟ ಹೆಚ್ ಎಲ್ ಎನ್ ರಾವ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾಟ ಮಹೇಶ್ ಜೋಶಿ, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಹಾಗೂ ನ್ಯಾಯಮೂರ್ತಿ ಡಾ. ಅಶೋಕ್ ಬಿ ಹಿಂಚಿಗೇರಿ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.










