ಕೆವಿಜಿ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಘಟಕದ ವಾರ್ಷಿಕ ವಿಶೇಷ ಶಿಬಿರ

0

ಕೆವಿಜಿ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಘಟಕದ 24-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವು ಮೇ. 26ರoದು ಕೋಲ್ಚಾರಿನ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮತೋಲನ ಪರಿಸರ ಸಮೃದ್ಧಿ ಭವಿಷ್ಯ ಎಂಬ ದ್ಯೇಯ ದೊಂದಿಗೆ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸರಕಾರಿ ಪ್ರಥಮದರ್ಜೆ ಕಾಲೇಜು ಕೊಡಿಯಾಲಬೈಲು ಇಲ್ಲಿನ ಪ್ರಾoಶುಪಾಲರಾದ ಸತೀಶ್ ಕುಮಾರ್ ಕೆ.ಆರ್ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪಾತ್ರವನ್ನು ಸವಿವರವಾಗಿ ವಿವರಿಸಿದರು. ಕಾರ್ಯಕ್ರಮದ ಉದ್ಘಾಟಕರಾದ ಆಲೆಟ್ಟಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳನ್ನು ಹೊರಹಾಕುವಲ್ಲಿ ರಾಷ್ಟ್ರೀಯ ಸೇವಾಘಟಕದ ಪಾತ್ರವನ್ನು ತಿಳಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕೋಲ್ಚಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾ ಸುದರ್ಶನ ಪಾತಿಕಲ್ಲು, ಶಾಲಾ ಶಿಕ್ಷಕಿ ಶ್ರೀಮತಿ ಜಾಲಜಾಕ್ಷಿ ಕೆ, ಅಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀಮತಿ ಶಂಕರಿ ಕೊಲ್ಲರಮೂಲೆ, ಸೀತಾರಾಮ ಕೊಲ್ಲರಮೂಲೆ, ಅಂಗನವಾಡಿ ಶಿಕ್ಷಕಿ ಶ್ರೀಮತಿ ರತ್ನಾವತಿ ವಾಲ್ತಾಜೆ ಶಿಬಿರದ ಯಶಸ್ಸಿಗೆ ಶುಭಹಾರೈಸಿದರು. ವಿದ್ಯಾರ್ಥಿನಿ ಶಿಬಿರಾರ್ಥಿ ಕು. ರಮ್ಯಾ ಕೆ ಪ್ರಾರ್ಥಿಸಿದರು. ಎನ್.ಎಸ್.ಎಸ್ ಗೀತೆಯೊಂದಿಗೆ ಮೊದಲ್ಗೊಂಡ ಕಾರ್ಯಕ್ರಮದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಘಟಕ ಕೋಶದ ಸಂಯೋಜಕಿ, ಉಪನ್ಯಾಸಕಿ ಶ್ರೀಮತಿ ನಯನ ಪಿ.ಯು ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಶಿಬಿರಾರ್ಥಿ ಕು. ಪ್ರಲೋಕ್ಷ ವಂದಿಸಿದರು. ವಿದ್ಯಾರ್ಥಿ ನಿ, ಶಿಬಿರಾರ್ಥಿ ಕು. ಚಂದನ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ದಲ್ಲಿ ಉಪನ್ಯಾಸಕರು, ವಿದ್ಯಾರ್ಥಿ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.