














ನಿರ್ಮಾಣ ಹಂತದಲ್ಲಿರುವ ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ನಾಗಸಾನಿಧ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮೇ. 27ರಂದು ಕ್ಷೇತ್ರದ ತಂತ್ರಿಗಳಾದ ಕುನ್ನತ್ತಿಲ್ ಬ್ರಹ್ಮಶ್ರೀ ಮುರಳಿಕೃಷ್ಣ ನಂಬೂದರಿಯವರ ನೇತೃತ್ವದಲ್ಲಿ ನಡೆಯಿತು. ಬೆಳಿಗ್ಗೆ ನಾಗತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಶ್ರೀ ರಾಜರಾಜೇಶ್ವರಿ ದೇವಿಯ ಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ ಆಶ್ಲೇಷ ಬಲಿ, ದೀಪಾರಾಧನೆ, ಪ್ರಸಾದ ವಿತರಣೆ ನಂತರ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ, ಪಂಜಿಗಾರು ಮತ್ತು ಎರಡೂ ಸಮಿತಿಗಳ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.










