














ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ೨೦೨೫ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ, ಪ್ರಾಜೆಕ್ಟ್ ಎಕ್ಸ್‌ಪೋ- ೨೦೨೫ ದಿನಾಂಕ ೨೭-೦೫-೨೦೨೫ರಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ಬಿ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ.ಯವರ ಶುಭ ಹಾರೈಕೆಯೊಂದಿಗೆ ನಡೆಯಿತು.

ಪ್ರದರ್ಶನದ ಉದ್ಘಾಟನೆಯನ್ನು ಕೆ.ವಿ.ಜಿ. ಪಾಲಿಟೆಕ್ನಿಕ್ ಪ್ರಾಂಶುಪಾಲ ಶ್ರೀ ಅಣ್ಣಯ್ಯ ಅವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರಾಜೆಕ್ಟ್ ತಯಾರುಮಾಡುವುದರಿಂದ ಕೌಶಲ್ಯವು ಉತ್ತೇಜನಗೊಳ್ಳುತ್ತದೆ ಎಂದು ಹೇಳಿ ಶುಭ ಹಾರೈಸಿದರು. ಕಾಲೇಜಿನ ಸಿ.ಇ.ಒ, ಕಂಪ್ಯೂಟರ್ ಸೈನ್ಸ್&ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಮತ್ತು ವಿ.ಟಿ.ಯು.ನ ಕಾರ್ಯಕಾರಿ ಮಂಡಳಿಸದಸ್ಯರಾದಡಾ. ಉಜ್ವಲ್ ಯು.ಜೆ.ಅತಿಥಿ ನೆಲೆಯಲ್ಲಿವಿದ್ಯಾರ್ಥಿಗಳಿಗೆ Reskilling Upskilling and New skilling ಎಂಬ ಧ್ಯೇಯ ಮಾರ್ಗವನ್ನು ಅಳವಡಿಸಿಕೊಳ್ಳಬೇಕು ಹಾಗೂ ಉದ್ಯೋಗ ಪಡೆಯಲು ಇದು ಉಪಯೋಗಕಾರಿಯಾಗಿದೆ. ಹೊಸ ತಂತ್ರಜ್ಞಾನಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವನ್ನು ಉಪಯೋಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ ಮಾತಾನಾಡಿ ಪ್ರಾಜೆಕ್ಟ್ ಎಕ್ಸ್‌ಪೋ ಪ್ರದರ್ಶನಕ್ಕೆ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು ಅಲ್ಲದೆ ಕಂಪೆನಿಯಲ್ಲಿಉದ್ಯೋಗ ಪಡೆಯಲು ಇದು ಸಹಕಾರಿಯಾಗುತ್ತದೆ ಎಂದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರುಪ್ರೊ. ರಾಘವೇಂದ್ರ ಬಿ. ಕಾಮತ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮ ನಿರೂಪಣೆಯನ್ನು ವಿದ್ಯಾರ್ಥಿಗಳಾದ ಲಿಖಿತ್ ಪಿ.ಪಿ. ಮತ್ತು ವಾಗ್ದೇವಿ ಎಂ.ಡಿ ನಡೆಸಿಕೊಟ್ಟರು. ಕಾಲೇಜಿನ ನಾಲ್ಕು ಇಂಜಿನಿಯರಿಂಗ್ ವಿಭಾಗಗಳಿಂದ ಒಟ್ಟು 50 ಕ್ಕಿಂತಲೂ ಅಧಿಕ ಪ್ರಾಜೆಕ್ಟ್‌ಗಳು ಪ್ರದರ್ಶಿತಗೊಂಡವು.ಉಪಪ್ರಾಂಶುಪಾಲರು ಮತ್ತು ಗಣಿತ ವಿಭಾಗದ ಮುಖ್ಯಸ್ಥರು ಡಾ. ಶ್ರೀಧರ್ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್ಲಾ ಡೀನ್‌ಗಳು, ವಿದ್ಯಾರ್ಥಿ ಕ್ಷೇಮಾಧಿಕಾರಿ, ಕಾಲೇಜಿನ ಆಡಳಿತಾಧಿಕಾರಿ,ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.










