ಜೂ.1: ಪಂಜದಲ್ಲಿ ವಲಯ ಅರಣ್ಯ ಅಧಿಕಾರಿಗಳಾಗಿ ಭಡ್ತಿಗೊಂಡ ಸಂತೋಷ್ ಕುಮಾರ್ ರೈಯವರಿಗೆ ಗೌರವಾರ್ಪಣೆ

0

ಪಂಜ ಪರಿಸರದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ವಲಯ ಅರಣ್ಯ ಅಧಿಕಾರಿಗಳಾಗಿ ಭಡ್ತಿಗೊಂಡ
ಸಂತೋಷ್ ಕುಮಾರ್ ರೈಯವರಿಗೆ ಗೌರವಾರ್ಪಣೆ ಕಾರ್ಯಕ್ರಮ ಜೂ.1 ರಂದು ಪೂರ್ವಾಹ್ನ 10 ರಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ವಹಿಸಲಿದ್ದಾರೆ. ದೇವಳದ ಗೌರವ ಸಲಹೆಗಾರ ಆನಂದ ಗೌಡ ಕಂಬಳ ಅಭಿನಂದನಾ ಭಾಷಣ ಮಾಡಲಿದ್ದಾರೆ.

ವಿವಿಧ ಸಂಘ ಸಂಸ್ಥೆಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ವೇಳೆ ವೈಯಕ್ತಿಕವಾಗಿ ಗೌರವಾರ್ಪಣೆ ಮಾಡುವವರಿಗೂ ಅವಕಾಶವಿರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.