
ಬೆಳ್ಳಾರೆ ಪೆರುವಾಜೆ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ 31 ರಂದು “Speak Smart” ಎಂಬ ವಿಷಯದ ಕುರಿತು ಸ್ನಾತಕೋತ್ತರ ವೃತ್ತಿ ಕೋಶ, ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.















ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಎಚ್.ಕೆ.ಎಸ್. ಪದವಿ ಪೂರ್ವ ಕಾಲೇಜು, ಹಾಸನ, ಇಲ್ಲಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಮಹೇಶ್ ಕೆ. ಎನ್. ಅವರು ಇಂದಿನ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಂವಹನ ಕೌಶಲ್ಯದ ಅಗತ್ಯತೆ ಹಾಗೂ ಪ್ರಾಮುಖ್ಯತೆಯ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ವೃತ್ತಿ ಭವಿಷ್ಯ ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಮಾಡಬೇಕಾದ ತಯಾರಿಯ ಕುರಿತು ಸವಿಸ್ತಾರವಾಗಿ ಅರಿವು ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಸುಬ್ರಹ್ಮಣ್ಯ ಪಿ.ಎಸ್. ಇವರು ವಹಿಸಿದ್ದರು. ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ವೃತ್ತಿ ಕೋಶದ ಸಂಯೋಜಕರಾದ ಶ್ರೀಮತಿ ಪ್ರತಿಮಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಡಾ.ರಾಮಚಂದ್ರ ಕೆ., ಸ್ನಾತಕೋತ್ತರ ವಾಣಿಜ್ಯ ವಿಭಾಗದ ಅಧ್ಯಾಪಕರುಗಳಾದ ಪೊನ್ನಪ್ಪ ಎ.ಎಂ., ಶ್ರೀಮತಿ ದೀಪಾ ಬಿ. ಹಾಗೂ ಶ್ರೀಮತಿ ವಿನುತಾ ಎಂ. ಉಪಸ್ಥಿತರಿದ್ದರು. ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಕು. ನಿಶ್ಮಿತಾ ನೆರೆದವರನ್ನು ಸ್ವಾಗತಿಸಿ, ಕು. ವಿದ್ಯಾಶ್ರೀ ವಂದಿಸಿದರು. ಕು. ನಿರೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದರು.










