ವಿನೋಬನಗರ : ಶಾಲಾ ಪ್ರಾರಂಭೋತ್ಸವ

0
   ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೋಬನಗರ ಜಾಲ್ಸುರು ಇಲ್ಲಿ ಶಾಲಾ ಪ್ರಾರಂಭೋತ್ಸವವನ್ನು ನಡೆಸಲಾಯಿತು.

ವಿದ್ಯಾ ಸಂಸ್ಥೆಗೆ ನೂತನವಾಗಿ ದಾಖಲಾತಿ ಹೊಂದಿದ ಮತ್ತು ನಮ್ಮ ಸಂಸ್ಥೆಯಲ್ಲಿ ಇರುವ ಎಲ್ಲಾ ವಿದ್ಯಾರ್ಥಿಗಳಿಗೆ ಆರತಿ ಹಾಗೂ ಪುಷ್ಪಾರ್ಚನೆ ಮಾಡುವುದರ ಮೂಲಕ ಬ್ಯಾಂಡ್ ವಾದ್ಯ ಘೋಷಗಳೊಂದಿಗೆ ವಿದ್ಯಾರ್ಥಿಗಳನ್ನು ಸಂಸ್ಥೆಗೆ ಬರಮಾಡಿಕೊಳ್ಳಲಾಯಿತು.


ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಗಿರೀಶ್ ಕುಮಾರ್, ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕರಾದ ಜಯಪ್ರಸಾದ್ ಕಾರಿಂಜ ಹಾಗೂ ಪೋಷಕ ವೃಂದದವರು ಸಂಸ್ಥೆಯ ಶಿಕ್ಷಕರ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.