ಆಡಳಿತ ಮಂಡಳಿಯಿಂದ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪ್ರೋತ್ಸಾಹ – ಡಾ. ಜ್ಯೋತಿ ಆರ್. ಪ್ರಸಾದ್

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಶಿಕ್ಷಣದ ಗುಣಮಟ್ಟವನ್ನು ಕಾಪಾಡುವಲ್ಲಿ ಆಡಳಿತ ಮಂಡಳಿ ಕಡೆಯಿಂದ ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಉತ್ತಮ ಶಿಕ್ಷಕರ ತಂಡ ಇದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದೇವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಅಂಕಗಳನ್ನು ಪಡೆದು ಭವಿಷ್ಯ ರೂಪಿಸಿಕೊಳ್ಳಿ ಎಂದು ಎ.ಒ.ಎಲ್.ಇ ಕಮಿಟಿ ಬಿ ಕಾರ್ಯದರ್ಶಿ ಹಾಗೂ ಕೆವಿಜಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ಡಾ. ಜ್ಯೋತಿ ಆರ್. ಪ್ರಸಾದ್ ಹೇಳಿದರು.

ಅವರು ಜೂ. 2ರಂದು ಸುಳ್ಯದ ಅಮರಶ್ರೀ ಭಾಗ್ ನ ಡಾ. ಕುರುಂಜಿ ವೆಂಕಟ್ರಮಣ ಗೌಡ ಸಮುದಾಯ ಭವನದಲ್ಲಿ ನಡೆದ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಓರಿಯೆಂಟೇಷನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.








ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೆವಿಜಿ ಡೆಂಟಲ್ ಕಾಲೇಜಿನ ಎಕ್ಸಿಕ್ಯುಟಿವ್ ಡೈರೆಕ್ಟರ್ ಹಾಗೂ ಕೆವಿಜಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ಮೌರ್ಯ ಆರ್. ಕುರುಂಜಿ ಭಾಗವಹಿಸಿದ್ದರು. ಕಾಲೇಜಿನ ಉಪಪ್ರಾಂಶುಪಾಲರಾದ ದೀಪಕ್ ವೈ.ಆರ್ ಸ್ವಾಗತ ಮಾತುಗಳೊಂದಿಗೆ ಕಾಲೇಜಿನ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಸಿಇಟಿ, ನೀಟ್, ಜೆಇಇ ಪೂರ್ವ ತಯಾರಿಯ ಬಗ್ಗೆ ವಿಜ್ಞಾನ ವಿಭಾಗದ ಉಪನ್ಯಾಸಕಿ ಭವ್ಯ ಸಿ.ಟಿ ಮಾಹಿತಿ ನೀಡಿದರೆ, ವಾಣಿಜ್ಯ ವಿಷಯಗಳಿಗೆ ಸಂಬಂಧಿಸಿದ ಮಾಹಿತಿಯನ್ನು ವಾಣಿಜ್ಯ ವಿಭಾಗದ ಉಪನ್ಯಾಸಕರಾದ ದೀಕ್ಷಿತ್ ಎಂ.ಕೆ ನೀಡಿದರು. ಉಪನ್ಯಾಸಕಿ ಶ್ರೀಮತಿ ಅರ್ಪಿತಾ ಸಾಧಕ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ಸಾಧಕ ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿದ್ದ ಗಣ್ಯರು ಸನ್ಮಾನಿಸಿದರು.

ವಿದ್ಯಾರ್ಥಿಗಳಾದ ಮೊಹಮ್ಮದ್ ಲಾಝಿಮ್, ಪ್ರೇಕ್ಷಾ ಬಿ.ಸಿ, ಅರ್ಚನಾ ಜಯನ್, ಪೃಥ್ವಿ ಎಂ, ಕೀರ್ತನ್ ಸಿ.ವಿ, ಮರಿಯಮ್ ಶಿಭಾ ಅಭಿಪ್ರಾಯ ವ್ಯಕ್ತಪಡಿಸಿದರು.
ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಮಲ್ಲಿಕಾ ಎಂ.ಎಲ್ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಹಿಂದಿ ಉಪನ್ಯಾಸಕಿ ಶ್ರೀಮತಿ ಸುಶ್ಮಿತಾ ಜಾಕೆ ವಂದಿಸಿದರು. ಕಾರ್ಯಕ್ರಮದ ಆರಂಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಸ್ವಾಗತ ನೃತ್ಯ ಮಾಡಿದರು.
ಡಾ. ಕುರುಂಜಿಯವರು ತಮ್ಮ 60ನೇ ವಯಸ್ಸಿನಲ್ಲಿ ವಿವಿಧ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿದರು. ಆದರೆ ಈಗ ಹಾಗಿಲ್ಲ. ಸಮಯ ಅನ್ನುವಂತದ್ದು ತುಂಬಾ ಪ್ರಾಮುಖ್ಯವಾದದ್ದು. ಸಿಕ್ಕಿದ ಅವಕಾಶವನ್ನು ಸರಿಯಾಗಿ ಬಳಕೆ ಮಾಡಿ – ಮೌರ್ಯ ಆರ್. ಪ್ರಸಾದ್

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ಸುಳ್ಯದಲ್ಲಿಯೇ ಸಿಗಬೇಕೆಂಬ ಉದ್ದೇಶದಿಂದ ಡಾ. ರೇಣುಕಾಪ್ರಸಾದ್ ರವರು ಸುಳ್ಯದಲ್ಲಿ ಕೆವಿಜಿ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜನ್ನು 2016ರ ಜೂ. 6ರಂದು ಸ್ಥಾಪಿಸಿದರು. ನಮ್ಮ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್, ಟ್ರಸ್ಟಿಗಳಾದ ಡಾ. ಜ್ಯೋತಿ ಆರ್. ಪ್ರಸಾದ್, ಮೌರ್ಯ ಆರ್. ಕುರುಂಜಿಯವರ ಮಾರ್ಗದರ್ಶನದಲ್ಲಿ ಸಂಸ್ಥೆ ಉತ್ತಮವಾಗಿ ನಡೆಯುತ್ತಿದೆ.
ಪೋಷಕರು ತಮ್ಮ ಮಕ್ಕಳ ಬಗ್ಗೆ ನಿರೀಕ್ಷೆಗಳನ್ನು ಇಟ್ಟುಕೊಂಡು ನಮ್ಮ ಸಂಸ್ಥೆಗೆ ಸೇರಿಸಿದ್ದೀರಿ. ನಿಮ್ಮ ನಿರೀಕ್ಷೆಗಳನ್ನು ನಾವು ಈಡೇರಿಸುತ್ತೇವೆ ಡಾ. ಯಶೋಧ ರಾಮಚಂದ್ರ










