ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ

0

ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಮತ್ತುಸ್ವಾಗತ ಕಾರ್ಯಕ್ರಮ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯರವರು ವಹಿಸಿ, ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ನಮ್ಮ ಸಂಸ್ಥೆಯಲ್ಲಿ ಮಧ್ಯಮ ಮತ್ತು ಬಡ ವರ್ಗದ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸವನ್ನು ಪಡೆದುಕೊಂಡು ಒಳ್ಳೆಯ ಫಲಿತಾಂಶವನ್ನು ಕೊಟ್ಟಿರುತ್ತಾರೆ. ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ಸಿಗುವ ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ .ಕೆ.ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಶಿಸ್ತು ಮತ್ತು ನಿಯಮಗಳನ್ನು ತಿಳಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ದಾಮೋದರ. ಎನ್ ರವರು ಸ್ವಾಗತಿಸಿ, ಸಮಾಜ ಶಾಸ್ತ್ರ ಉಪನ್ಯಾಸಕ ಶ್ರೀ ಬಾಲಕೃಷ್ಣ.ಕೆ ರವರು ವಂದಿಸಿದರು.

ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ. ಎ.ಎಸ್ ರವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಬೋಧಕ ಬೋಧಕೇತರ ವೃಂದ, ವಿದ್ಯಾರ್ಥಿಗಳ ಹೆತ್ತವರು, ಪೋಷಕರು ವಿದ್ಯಾರ್ಥಿ ಮತ್ತುವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.