ಗ್ರೀನ್ ವ್ಯೂ ಶಾಲೆ ಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ

0

ವಾದ್ಯಗಳೊಂದಿಗೆ ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ

ಸುಳ್ಯ :ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ವರ್ಷದ ಸಂಭ್ರಮದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜೂನ್ ೨ ರಂದು ನಡೆಯಿತು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಹಾಜಿ ಅಬ್ದುಲ್ ಮಜೀದ್ ಜನತಾ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸುಳ್ಯ ಸೂಡ ಅಧ್ಯಕ್ಷರಾದ ಕೆ ಎಂ ಮುಸ್ತಫಾರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಗರ ಪಂಚಾಯತ್ ಸದಸ್ಯ ಕೆ ಎಸ್ ಉಮರ್, ನಾಮ ನಿರ್ದೇಶಕ ಸದಸ್ಯ ಸಿದ್ದೀಕ್ ಕೊಕ್ಕೊ, ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳಾದ ಶಾಫಿ ಕುತ್ತಮೊಟ್ಟೆ ಹಾಗೂ ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಇಲ್ಯಾಸ್ ಕೆ ಕಾಶಿಪಟ್ಣ ಸ್ವಾಗತಿಸಿ. ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಶಿಕ್ಷಕ ಮಂಜುನಾಥ ನೆರೆವೇರಿಸಿದರು.

ಮಕ್ಕಳೊಂದಿಗೆ ಮೆರವಣಿಗೆ ಮೂಲಕ ಶಾಲೆಯತ್ತ ಹೆಜ್ಜೆಹಾಕಿದ ಆಡಳಿತ ಮಂಡಳಿ,ಶಿಕ್ಷಕರು ಹಾಗೂ ಪೋಷಕ ವೃಂದ ಅವರಿಗೆ ಹಸ್ತಲಾಘವ ನೀಡಿ, ಹೊಸ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.ವಿ ದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕ ರಂಜಿತ್ ವಂದಿಸಿದರು.