ಸುಳ್ಯ ತಾಲೂಕು ಪಿಂಚಣಿದಾರರ – ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ

0

ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘದ 2024 -25 ನೇ ಸಾಲಿನ ವಾರ್ಷಿಕ ಮಹಾಸಭೆ ಜೂ.೩ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸಂಘದ ಅಧ್ಯಕ್ಷರಾದ ಡಾ. ರಂಗಯ್ಯರವರು ಅಧ್ಯಕ್ಷತೆ ವಹಿಸಿದ್ದರು.

ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮುಖ್ಯ ಅತಿಥಿಗಳಾಗಿದ್ದರು.

ಉಪಾಧ್ಯಕ್ಷ ರಾಮಚಂದ್ರ ಗೌಡ ಪಳಂಗಾಯ, ಶ್ರೀಮತಿ ಪ್ರೇಮ,
ಲೆಕ್ಕಪತ್ರದಾರರಾದ ಸುಬ್ರಹ್ಮಣ್ಯ ಭಟ್ ವೇದಿಕೆಯಲ್ಲಿ ಇದ್ದರು.

ವರದಿ ಸಾಲಿನಲ್ಲಿ ನಿಧನರಾದ ಸಂಘದ ಸದಸ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಂಘದ ಗೌರವಾಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸಂಘದ ಕಾರ್ಯದರ್ಶಿ ಪ್ರೊ.ದಾಮೋದರ ಗೌಡ ವರದಿ ಮಂಡಿಸಿದರು.

ಅಬ್ದುಲ್ಲ ಮಾಸ್ತರ್ ಅರಂತೋಡು ಕಾರ್ಯಕ್ರಮ ನಿರೂಪಿಸಿದರು.