ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಮೂಡಬಿದಿರೆಯ ನ್ಯೂ ವೈಬ್ರೆಂಟ್ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ್‍ಯಾಂಕ್

0

ಮೂಡುಬಿದಿರೆ : ರಾಷ್ಟ್ರಮಟ್ಟದಲ್ಲಿ ನಡೆದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಪಿಯು ಕಾಲೇಜು ಕಲ್ಲಬೆಟ್ಟು ಇಲ್ಲಿನ ವಿದ್ಯಾರ್ಥಿಗಳು ಅತ್ಯುತ್ತಮ ರ್‍ಯಾಂಕ್ ಪಡೆದು ರಾಷ್ಟ್ರಮಟ್ಟದಲ್ಲಿ ಸಾಧನೆಗೈದಿದ್ದಾರೆ.

ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ರ್‍ಯಾಂಕ್ ಗಳಿಸುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ವಿದ್ಯಾರ್ಥಿಗಳಾದ ಗಣೇಶ್ 601 ರ್ಯಾಂ ಕ್, ವೈಷ್ಣವಿ ಎಂ 12161 ರ್‍ಯಾಂಕ್, ಮಿಲಿಂದ್ ವಿನಾಯಕ್ ಶೇಟ್ 27969 ರ್‍ಯಾಂಕ್, ಪಡೆದು ಕಾಲೇಜಿಗೆ ರಾಷ್ಟ್ರಮಟ್ಟದಲ್ಲಿ ಕೀರ್ತಿ ತಂದಿದ್ದಾರೆ. ರಾಜ್ಯದ ಬೇರೆ ಬೇರೆ ಭಾಗದ ಶಿಕ್ಷಣ ಸಂಸ್ಥೆಯಲ್ಲಿ ಸೇವೆಸಲ್ಲಿಸಿದ ಶಿಕ್ಷಕರೇ ಸೇರಿ ಕಟ್ಟಿದ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜು ಉತ್ತಮ ರೀತಿಯ ನೀಟ್, ಜೆಇಇ, ಸಿಇಟಿ ತರಬೇತಿ ನೀಡುತ್ತಾ ಬರುತ್ತಿದೆ. ಹಾಗೂ ಈ ಬಾರಿಯ ಕೆ-ಸಿಇಟಿ ಮತ್ತು ಬೋರ್ಡ್ ಪೆರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ . ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದನೆ ಸಲ್ಲಿಸಿರುತ್ತಾರೆ.