ಸುಬ್ರಹ್ಮಣ್ಯ:ಕುಮಾರ ನಾಯರ್ ಅವರ ಜನ್ಮದಿನದ ಸ್ಥಾಪಕರ ದಿನಾಚರಣೆ ಮತ್ತು ರಕ್ತದಾನ ಶಿಬಿರ

0

ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಸುಬ್ರಹ್ಮಣ್ಯದಲ್ಲಿ ಅನುಗ್ರಹ ಎಜುಕೇಶನ್ ಟ್ರಸ್ಟ್ ಮೂಲಕ ಕುಮಾರ ಸ್ವಾಮಿ ಆಂಗ್ಲಮಾಧ್ಯಮ ಪ್ರೌಢಶಾಲೆ ನಿರ್ಮಿಸಿರುವ ಅದರ ಸ್ಥಾಪಕ ಅಧ್ಯಕ್ಷ ದಿl ಕುಮಾರ ನಾಯರ್ ಅವರ ಜನ್ಮದಿನದ ಅಂಗವಾಗಿ ಸ್ಥಾಪಕರ ದಿನಾಚರಣೆಯನ್ನು ಹಾಗೂ ಆ ಪ್ರಯುಕ್ತ ರೋಟರಿ ಬ್ಲಡ್ ಸೆಂಟರ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಮತ್ತು ಕಳೆದ ಶೈಕ್ಷಣಿಕ ವರ್ಷ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಜೂ.3 ರಂದು ಕುಮಾರಸ್ವಾಮಿ ಶಾಲಾ ಸಭಾಂಗಣದಲ್ಲಿ ಏರ್ಪಡಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನುಗ್ರಹ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಗಣೇಶ್ ಪ್ರಸಾದ್ ನಾಯರ್ ವಹಿಸಿದ್ದರು.
ರಕ್ತದಾನ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಸುಳ್ಯ ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕರಾದ ಹರೀಶ್ ಬಂಟ್ವಾಳ್ ರವರು ಕುಮಾರ ನಾಯರ್ ಕುರಿತು ಸಂಸ್ಮರಣಾ ಭಾಷಣ ಮಾಡಿದರು.
ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ವಿಶ್ವನಾಥ ನಡುತೋಟ ಮುಖ್ಯ ಅತಿಥಿಯಾಗಿದ್ದರು.
ರಕ್ತದಾನ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಬಂದಿದ್ದ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ವೈದ್ಯಾಧಿಕಾರಿ ಡಾ. ಕೆ.ಪಿ.ಸೀತಾರಾಮ ಭಟ್ ರವರು ರಕ್ತದಾನದ ಮಹತ್ವವನ್ನು ವಿವರಿಸಿದರು.

ಸುಬ್ರಹ್ಮಣ್ಯ ಐನೆಕಿದು ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಚ್.ಎಲ್. ವೆಂಕಟೇಶ್ ಗೌರವ ಉಪಸ್ಥಿತರಿದ್ದರು.
ಶಾಲಾ ಸಂಚಾಲಕ ಚಂದ್ರಶೇಖರ ನಾಯರ್, ಪಿ.ಯು.ವಿಭಾಗದ ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ್, ಅನುಗ್ರಹ ಟ್ರಸ್ಟ್ ನ ಸದಸ್ಯ ಯಜ್ಞೇಶ್ ಆಚಾರ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಭಾರತಿ ದಿನೇಶ್ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾರತ್ನ ಸ್ವಾಗತಿಸಿ, ಶಿಕ್ಷಕ ಉಮೇಶ್ ಶೆಟ್ಟಿ ವಂದಿಸಿದರು. ಟ್ರಸ್ಟ್ ಉಪಾಧ್ಯಕ್ಷ ಶಿವರಾಮ ಏನೆಕಲ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಎಸೆಸೆಲ್ಸಿಯಲ್ಲಿ ಮತ್ತು ಪಿ.ಯು.ಸಿ.ಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಶಿಕ್ಷಕ ಶಶಿಕಾಂತ್ ಕಾರ್ಯಕ್ರಮ ನಿರೂಪಿಸಿದರು.

ರಕ್ತದಾನ ಶಿಬಿರದಲ್ಲಿ ಸುಮಾರು 25 ಮಂದಿ ಭಾಗವಹಿಸಿ ರಕ್ತದಾನಗೈದರು.