ಜ್ಞಾನ ದೀಪ ವಿದ್ಯಾ ಸಂಸ್ಥೆ ಎಲಿಮಲೆ ಯಲ್ಲಿ ಶೈಕ್ಷಣಿಕ ವರ್ಷದ ಪ್ರವೇಶೋತ್ಸವ ಮತ್ತು ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವು ಮೇ. 31ರಂದು ನಡೆಯಿತು.

ಬೆಳಿಗ್ಗೆ ಗಣಪತಿ ಹವನ ನಡೆಯಿತು. ನಂತರ ಎಸ್.ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಂದ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಲಾಯಿತು.








ಬಳಿಕ ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದ್ಯಗಳ ಮೂಲಕ ಆರತಿ ಬೆಳಗಿ, ಕುಂಕುಮ ಹಚ್ಚಿ ಸ್ವಾಗತಿಸಲಾಯಿತು.
ಪ್ರತಿ ಪೋಷಕರು ತಮ್ಮ ಮಕ್ಕಳಿಗೆ ಅಕ್ಷತೆಯನ್ನು ಹಾಕಿ ಆಶೀರ್ವದಿಸಿದರು.

ನಂತರ ಎಸ್.ಎಸ್.ಎಲ್. ಸಿ. ಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮೂವರು ವಿದ್ಯಾರ್ಥಿಗಳಿಗೆ ಚಿನ್ನದ ಉಂಗುರ ಹಾಗೂ ಉಳಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ನೀಡಿ ಅಭಿನಂದಿಸಲಾಯಿತು. ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳ ಸಾಧನೆಗೆ ಕಾರಣರಾದ ಎಲ್ಲ ಶಿಕ್ಷಕರನ್ನು ಗೌರವಿಸಲಾಯಿತು .
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಚಂದ್ರಶೇಖರ್ ತಳೂರು ವಹಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕರು ಆಡಳಿತ ಮಂಡಳಿ ಎಲ್ಲ ನಿರ್ದೇಶಕರುಗಳು ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು. ಶಾಲೆಯ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.










