ಸುಳ್ಯದ ಸ್ನೇಹದಲ್ಲಿ ಪರಿಸರ ದಿನಾಚರಣೆ

0

ಶಿಕ್ಷಣ ಹಾಗೂ ಪರಿಸರ ಒಂದಕ್ಕೊಂದು ಪೂರಕವಾಗಿರಬೇಕು : ಡಾ. ಚಂದ್ರಶೇಖರದ ದಾಮ್ಲೆ

     " ಮಾನವರಿಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಗೊತ್ತಿದೆ. ಆದರೆ ಗಿಡ ಮರಗಳಿಗೆ ಅದು ಸಾಧ್ಯವಿಲ್ಲದ ಕಾರಣ ಮಾನವ ತನ್ನ ಸ್ವಾರ್ಥಕ್ಕಾಗಿ ಪರಿಸರ ನಾಶ ಮಾಡುತ್ತಿದ್ದಾನೆ . ಶಿಕ್ಷಣ ಮತ್ತು ಪರಿಸರ ಒಂದಕ್ಕೊಂದು ಪೂರಕವಾಗಿದ್ದಾಗ ಮಾತ್ರ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯ . ಪ್ಲಾಸ್ಟಿಕ್ ನ ತೊಂದರೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಆಗಬೇಕು. ಜನರಿಗೆ ಸ್ವಚ್ಛತೆಯ ಸ್ವಭಾವ ಬರಬೇಕು. ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಪ್ರತಿದಿನ ಮೈಗೂಡಿಸಿಕೊಂಡು ನಡೆದಾಗ ದೇಶಕ್ಕಾಗಿ ತಮ್ಮ ಕೊಡುಗೆಯನ್ನು ಕೊಟ್ಟಂತಾಗುತ್ತದೆ " ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ  ಅವರು ಹೇಳಿದರು. 

ಜೂ.5 ರಂದು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದ ಸಂಸ್ಥೆಯ ಶಿಕ್ಷಕಿ ಶ್ರೀಮತಿ ವನಿತಾ ಇವರು ಮಾತನಾಡಿ “ವಿನಾಶನಂಚಿನಲ್ಲಿರುವ ಪರಿಸರವನ್ನು ರಕ್ಷಿಸಬೇಕೆಂಬ ಜಾಗತಿಯನ್ನು ಮೂಡಿಸಲು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸುತ್ತೇವೆ. ಮಾನವ ತಾನು ಬೆಳೆಯುವುದರ ಜೊತೆಗೆ ಪರಿಸರವನ್ನು
ಬೆಳೆಸಿ ಉಳಿಸುವ ಕೆಲಸ ಮಾಡಬೇಕು . ನಾವು ಬದುಕಬೇಕು ಪರಿಸರದಲ್ಲಿರುವ ಜೀವಿಗಳನ್ನು ಬದುಕಲು ಬಿಡಬೇಕು. ‘ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ’ ಎಂಬ ಈ ವರ್ಷದ ಧ್ಯೇಯ ವಾಕ್ಯವನ್ನು ಎಲ್ಲರೂ ನೆನಪಿನಲ್ಲಿಟ್ಟುಕೊಂಡು ಅದರಂತೆ ಕಾರ್ಯಪ್ರವೃತ್ತರಾಗೋಣ ” ಎಂದು ಹೇಳಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಶಿಕ್ಷಕಿ ಶ್ರೀಮತಿ ಮಾಲತಿ ಇವರು ಮಾತನಾಡಿ “ಮನೆಗೊಂದು ಮರ ದೇಶಕ್ಕೆ ವರ” ಎಂಬಂತೆ ನಮ್ಮ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ.

ಭೂಮಿಯನ್ನು ಸಂರಕ್ಷಣೆ ಮಾಡಬೇಕು . ಒಂದೇ ದಿನಕ್ಕೆ ಈ ಆಚರಣೆ ಸೀಮಿತವಾಗದೆ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪರಿಸರ ಸ್ನೇಹಿ ವಸ್ತುಗಳನ್ನು ಬಳಸಬೇಕು. ಗಿಡಗಳನ್ನು ನೆಟ್ಟು ಪೋಷಿಸುವ ಕೆಲಸ ಆಗಬೇಕು” ಎಂದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ಸವಿತಾ ಎಂ ಸ್ವಾಗತಿಸಿ, ಶ್ರೀಮತಿ ಗಿರಿಜಾ ಕುಮಾರಿ ವಂದಿಸಿದರು. ಶಿಕ್ಷಕ ದೇವಿ ಪ್ರಸಾದ ಜಿ. ಸಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕರು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು.