ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ 35ನೇ ವರ್ಷದ ಕಾಲೇಜು ವಾರ್ಷಿಕೋತ್ಸವ, ಬಹುಮಾನ ವಿತರಣೆ

0

ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ 35ನೇ ವರ್ಷದ ಕಾಲೇಜು ವಾರ್ಷಿಕೋತ್ಸವ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ಜೂ. 05ರoದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ‘ಕಾನೂನು ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಇರುವ ವಿಫುಳ ಅವಕಾಶಗಳನ್ನು ಬಳಸಿಕೊಳ್ಳಲು ಗ್ರಂಥಾಲಯಗಳು ಹಾಗೂ ಕಂಪ್ಯೂಟರ್ ಜ್ಞಾನ ಮಹತ್ವ ಪಾತ್ರವನ್ನು ವಹಿಸುತ್ತದೆ . ಅದಕ್ಕಾಗಿ ಅತಿ ಹೆಚ್ಚು ಗ್ರಂಥಾಲಯಗಳನ್ನು ಉಪಯೋಗಿಸಿಕೊಳ್ಳಿ. ಪುಸ್ತಕಗಳನ್ನು ಓದಿ ಕಂಪ್ಯೂಟರ್ ಜ್ಞಾನವನ್ನು ಹೆಚ್ಚಿಸಿಕೊಳ್ಳಿ’ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮೇಜರ್ ಡಾ. ಕುಶ್ವಂತ್ ಕೊಳಿಬೈಲು ಭಾಗವಹಿಸಿ, ‘ಜಗತ್ತು ತಾಂತ್ರಿಕವಾಗಿ ತುಂಬಾ ಮುಂದುವರೆದಿದೆ ಅದಕ್ಕೆ ತಕ್ಕಂತೆ ನಾವು ಬದಲಾಗಬೇಕು. ಹೊಸ ಹೊಸ ವಿಚಾರಳನ್ನು ನಿರಂತವಾಗಿ ಕಲಿಯುತ್ತಿರಬೇಕು. ಹಾಗಿದ್ದಲ್ಲಿ ಮಾತ್ರ ನಾವು ಯಾವುದೇ ಕ್ಷೇತ್ರದಲ್ಲಾದರೂ ಮಿಂಚಬಹುದು ‘ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಗೌರವ ಅತಿಥಿಗಳ ನೆಲೆಯಲ್ಲಿ ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಕೆ.ವಿ ದಾಮೋದರ ಗೌಡ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಟೀನಾ ಹೆಚ್ ಎಸ್, ವಿದ್ಯಾರ್ಥಿ ಸಂಘದ ನಾಯಕ ಮುಶ್ರಫ್ ಅಹಮ್ಮದ್, ಕಾರ್ಯದರ್ಶಿ ಮಾನಸ ಎಮ್, ಉಪ ಕಾರ್ಯದರ್ಶಿ ಸುಷ್ಮಾಂಜಲಿ ಸಿ.ಯು ಉಪಸ್ಥಿತರಿದ್ದರು. ಟೀನಾ ಹೆಚ್.ಎಸ್ ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ಮಾನಸ ಎಮ್ ವಿದ್ಯಾರ್ಥಿ ಸಂಘದ ಕಾರ್ಯ ಚಟುವಟಿಕೆಗಳ ವರದಿ ತಿಳಿಸಿದರು. ಬಳಿಕ ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ರಮ್ಯಾ ಮತ್ತು ಬಳಗ ಪ್ರಾರ್ಥಿಸಿದರು. ಉಪನ್ಯಾಸಕರಾದ ಕಲಾವತಿ ಸ್ವಾಗತಿಸಿ, ಮುಶ್ರಫ್ ಅಹಮ್ಮದ್ ವಂದಿಸಿದರು. ಶರ್ಮಿಳಾ ಬಿ ರೈ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕರಾದ ರಚನಾ ಕೆ ಹಾಗೂ ನಯನ ಪಿ.ಯು ಕಾರ್ಯಕ್ರಮ ನಿರೂಪಿಸಿದರು. ಈ ಸಂಧರ್ಭದಲ್ಲಿ ಭೋದಕ, ಭೋದಕೇತರ ವೃಂದ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.