
ಬೊಳುಬೈಲಿನ ಪೀಸ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ. 5 ರಂದು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕ ಕೆ.ಅಬೂಬಕರ್ ಉಪಸ್ಥಿತರಿದ್ದು ಶುಭ ಹಾರೈಸಿದರು.
ಶಾಲೆಯ ಪ್ರಾಂಶುಪಾಲ ಮುಹಮ್ಮದ್ ಸೈಫುಲ್ಲಾ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು.









ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಗಿಡ ನೆಟ್ಟುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಲಾವರಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು.
ಪರಿಸರ ದಿನಾಚರಣೆಯ ಕುರಿತು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಕಿಯರಾದ ಜಾಹ್ನವಿ ಮತ್ತು ಫೈರೋಜ ಪ್ಲಾಸ್ಟಿಕ್ ನಿರ್ಮಾಲನೆಯ ಕುರಿತು ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಸಿಕೊಟ್ಟರು.
ಶಿಕ್ಷಕಿ ಮಮ್ತಾಜ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಮಾಶಿತ ಸ್ವಾಗತಿಸಿ, ಆಯಿಷಾ ಖಾತೂನ್ ವಂದಿಸಿದರು. ವಿದ್ಯಾರ್ಥಿನಿ ಇಶಲ್ ಮರ್ಯಮ್ ಕಿರಾತ್ ಪಠಿಸಿದರು.










