ಧರ್ಮಸ್ಥಳಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ,ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ವಲಯ ಇದರ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯು ಜೂ.6 ರಂದು ಸುಳ್ಯಜೂನಿಯರ್ ಕಾಲೇಜಿನಸಭಾಭವನದಲ್ಲಿ ನಡೆಯಿತು.








ಕಾಲೇಜಿನಪ್ರಾಂಶುಪಾಲರಾದ ಮೋಹನ್ ಕೆ.ಬಿ ಯವರು ಅಧ್ಯಕ್ಷತೆ ವಹಿಸಿದ್ದರು.
ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ್ ಅಮೆಚೂರ್ ದೀಪ ಪ್ರಜ್ವಲಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ಶ್ರೀಹರಿ ಕುಕ್ಕುಡೇಲು ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಎ.ಎಸ್.ಐ ಶೀನಪ್ಪ, ಯೋಜನಾಧಿಕಾರಿ ಮಾಧವ ಗೌಡ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜು ವಿದ್ಯಾರ್ಥಿಗಳು ಮತ್ತು ಅದ್ಯಾಪಕ ವೃಂದದವರು ಭಾಗವಹಿಸಿದರು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಯೋಜನೆಯ ಮೇಲ್ವಿಚಾರಕಿ ಜಯಂತಿ ಸ್ವಾಗತಿಸಿದರು. ಯೋಜನಾಧಿಕಾರಿ ಮಾಧವ ಗೌಡ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಸೇವಾ ಪ್ರತಿನಿಧಿ ಸೌಜನ್ಯ ವಂದಿಸಿದರು.
ಮೇಲ್ವಿಚಾರಕ ದಿನೇಶ್ ಡಿ ಕಾರ್ಯಕ್ರಮ ನಿರೂಪಿಸಿದರು.










