ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯ : ನ್ಯಾಯಾಧೀಶ ಬಿ ಮೋಹನ್ ಬಾಬು

ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ,ವಕೀಲರ ಸಂಘ ಸುಳ್ಯ ಹಾಗೂ ಅರಣ್ಯ ಇಲಾಖೆ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಜೂನ್ 5 ರಂದು ಅರಂಬೂರು ಕೇಂದ್ರೀಯ ನಾಟ ಸಂಗ್ರಹಾಲಯದಲ್ಲಿ ನಡೆಯಿತು.















ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಬಿ ಮೋಹನ್ ಬಾಬುರವರು ನೆರವೇರಿಸಿ ಮಾತನಾಡಿ ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆ ಅತಿಯಾಗಿ ನಡೆಯುತ್ತಿದ್ದು ಪ್ಲಾಸ್ಟಿಕ್ ಪರಿಸರಕ್ಕೂ ಹಾಗೂ ಜನಜೀವನಕ್ಕೂ ಮಾರಕವಾಗಿದೆ. ಪ್ಲಾಸ್ಟಿಕ್ ಬಳಕೆಯಿಂದ ಇತ್ತೀಚಿಗೆ ಕ್ಯಾನ್ಸರ್ ಕಾರಕ ಕಾಯಿಲೆಗಳು ಹೆಚ್ಚಾಗಿ ಬರುತ್ತಿದೆ ಎಂಬ ವರದಿಗಳು ನಮಗೆ ಕೇಳಿ ಬರುತ್ತಿದ್ದರು ಕೂಡ ಅದನ್ನು ನಾವು ನಿಯಂತ್ರಿಸಲು ಮುಂದಾಗುವುದಿಲ್ಲ. ಸಮಾಜದ ಪ್ರತಿಯೊಬ್ಬ ವ್ಯಕ್ತಿಯು ಪ್ಲಾಸ್ಟಿಕ್ ಬಳಕೆಯಿಂದ ದೂರವಿರಬೇಕು ಮತ್ತು ಅದನ್ನು ನಾವು ನಮ್ಮ ಮನೆಯಿಂದಲೇ ಪಾಲನೆಯನ್ನು ಮಾಡಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಕು. ಅರ್ಪಿತಾ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ವಕೀಲರ ಸಂಘದ ಅಧ್ಯಕ್ಷ ಸುಕುಮಾರ್ ಕೊಡ್ತುಗುಳಿ ವಹಿಸಿ ವಿಶ್ವ ಪರಿಸರ ದಿನದ ಕುರಿತು ಮಾತನಾಡಿದರು.
ಮುಖ್ಯ ಆತಿಥಿಗಳಾಗಿ ಸಹಾಯಕ ಸರ್ಕಾರಿ ಅಭಿಯೋಜಕರು ರಮೇಶ ಆರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ, ವಲಯ ಅರಣ್ಯಾಧಿಕಾರಿ ಮಂಜುನಾಥ ಎನ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ವಕೀಲರುಗಳು ಉಪಸ್ಥಿತರಿದ್ದರು.ಅರಣ್ಯ ವಲಯಾಧಿಕಾರಿ ಮಂಜುನಾಥ ಸ್ವಾಗತಿಸಿ ವಂದಿಸಿದರು.










