
ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ..6 ರಂದು ಆಚರಿಸಲಾಯಿತು.
















ಪಂಜ ವಲಯ ಅರಣ್ಯ ಅಧಿಕಾರಿ ಶ್ರೀಮತಿ ಸಂಧ್ಯಾ ರವರು ಮಾತನಾಡಿ
“ಗಿಡಗಳನ್ನು ನೆಟ್ಟು ಬೆಳೆಸುವುದರ ಮೂಲಕ ಪರಿಸರ ರಕ್ಷಣೆ ಹಾಗೂ ಅರಣ್ಯದ ಪ್ರಮಾಣವನ್ನು ಹೆಚ್ಚಿಸುವ ಹೊಣೆಗಾರಿಕೆ ನಮ್ಮೆಲ್ಲರಿಗಿದೆ. ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆಯಿಂದ ಮಾನವ ಹಾಗೂ ಪ್ರಾಣಿ ಸಂಕುಲಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಆಂತಹ ಪ್ಲಾಸ್ಟಿಕ್ ನಿಯಂತ್ರಿಸುವ ಕಾರ್ಯ ಆಗ ಬೇಕು.” ಎಂದು ಅವರು ಮಾಹಿತಿ ನೀಡಿದರು.

ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಅಧ್ಯಕ್ಷ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ, ಎಸ್ ಡಿ ಎಂ ಸಿ ಅಧ್ಯಕ್ಷ ಲಿಗೋದರ ಆಚಾರ್ಯ ಯನ್, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಬಿ ಲಕ್ಷ್ಮಣ ಗೌಡ ಬೊಳ್ಳಾಜೆ ಉಪ ವಲಯ ಅರಣ್ಯ ಅಧಿಕಾರಿ ಪ್ರಕಾಶ್ ಅಗಸಿಮನಿ, ಮುಖ್ಯ ಶಿಕ್ಷಕಿ ಶ್ರೀಮತಿ ಲೀಲಾಕುಮಾರಿ,ಗಸ್ತು ಅರಣ್ಯಪಾಲಕರಾದ, ಚಿದಾನಂದ ಬಿ, ಭರಮಪ್ಪ ಹೆಚ್, ಆಕಾಶ್, ಅರಣ್ಯ ವೀಕ್ಷಕರಾದ ವಿಜಯಕುಮಾರ್ ,ಮೋಹನ್ ವೆಂಕಟ್ರಮಣ , ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಇದೇ ವೇಳೆ ವಿವಿಧ ಬಗೆಯ ಗಿಡಗಳನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಲೀಲಾಕುಮಾರಿ ಸ್ವಾಗತಿಸಿದರು. ಗಸ್ತು ಅರಣ್ಯಪಾಲಕ ಚಿದಾನಂದ ಬಿ ವಂದಿಸಿದರು.










