ಸುಳ್ಯ ವಲಯದ ಸಂಪಾಜೆ ಶಾಖೆ ವ್ಯಾಪ್ತಿಯ ಸಂಪಾಜೆ ಗ್ರಾಮದ ಗೂನಡ್ಕ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜೂನ್ 10 ರಂದು ಗಿಡಗಳನ್ನು ನೆಡುವುದರ ಮೂಲಕ ವನ ಮಹೋತ್ಸವವನ್ನು ಆಚರಿಸಲಾಯಿತು.

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೆಲು ರವರು ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.
















ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಎಸ್. ಪಿ. ಲೋಕನಾಥ್ ಅಧ್ಯಕ್ಷತೆ ವಹಿಸಿದ್ದರು.
ಪರಿಸರ ಸಂರಕ್ಷಣೆ ಹಾಗೂ ವನಮಹೋತ್ಸವ ಆಚರಣೆ ಬಗ್ಗೆ ಸಂಪಾಜೆ ಶಾಖಾ ಉಪ ವಲಯ ಅರಣ್ಯಾಧಿಕಾರಿಗಳಾದ ವೆಂಕಟೇಶ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವೇದಿಕೆಯಲ್ಲಿ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಸೋಮಶೇಖರ್ ಕೊಯಿಂಗಾಜೆ,
ಶಾಲಾ ಆಡಳಿತ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಕಲ್ಲಗದ್ದೆ, ನಿರ್ದೇಶಕರಾದ ಮಹಮ್ಮದ್ ಕುಂಞಿ ಗೂನಡ್ಕ,ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬೂಬಕ್ಕರ್ ಸಿದ್ದೀಕ್ ,ಶಾಲಾ ಮುಖ್ಯ ಶಿಕ್ಷಕರಾದ ಹನುಮಂತಪ್ಪ ಮೊದಲಾದವರು ಉಪಸ್ಥಿತರಿದ್ದರು.
ಆಡಳಿತ ಸಮಿತಿ ಸದಸ್ಯರು, ಇಲಾಖಾ ಸಿಬ್ಬಂದಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.
ಗಸ್ತು ಅರಣ್ಯ ಪಾಲಕರಾದ ಮನೋಜ್ ರವರು ಸ್ವಾಗತಿಸಿ, ಮುಖ್ಯ ಶಿಕ್ಷಕರಾದ ಹನುಮಂತಪ್ಪ ರವರು ವಂದನಾರ್ಪಣೆ ಸಲ್ಲಿಸಿದರು.
ಶಿಕ್ಷಕಿ ಭವಿತ ರವರು ಕಾರ್ಯಕ್ರಮ ನಿರೂಪಿಸಿದರು.










