ಸುಬ್ರಹ್ಮಣ್ಯ: ಯುವಕನಿಗೆ ರಸ್ತೆಯಲ್ಲೇ ಹಲ್ಲೆ ಪ್ರಕರಣ

0

ಆರೋಪಿಯ ಬಂಧನ, ಜಾಮೀನು ಮಂಜೂರು

ಸುಬ್ರಹ್ಮಣ್ಯ ಕಾಶಿಕಟ್ಟೆ ಮಾರ್ಗದಲ್ಲಿ ಆದಿ ಸುಬ್ರಹ್ಮಣ್ಯ ಕಡೆಗೆ ಹೋಗುವ ರಸ್ತೆಯಲ್ಲಿ ಜೂ.7ರಂದು ಹಲ್ಲೆ ನಡೆದಿದೆ ಎನ್ನಲಾದ ಘಟನೆಗೆ ಸಂಬಂಧಿಸಿ ಶಂಕರ್ ಎಂಬಾತನನ್ನು ತುಮಕೂರಿನಲ್ಲಿ ಬಂಧಿಸಿ ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿರುವುದಾಗಿ ತಿಳಿದು ಬಂದಿದೆ.

ಅರೋಪಿನ ಮೇಲೆ ಸುಬ್ರಹ್ಮಣ್ಯ ಠಾಣೆಯಲ್ಲಿ ಕಲಂ:126(2),115(2),352 BNS ರಂತೆ ಪ್ರಕರಣ ದಾಖಲಾಗಿದ್ದು ನ್ಯಾಯಾಲಯ ಜಾಮೀನು ನೀಡಿರುವುದಾಗಿ ತಿಳಿದು ಬಂದಿದೆ.