ಅಂತರರಾಷ್ಟ್ರೀಯ ‘ಗ್ರೀನ್‌ ಆಸ್ಕರ್‌’ ಸೆಲ್ಕೋ ಮಡಿಲಿಗೆ

0

ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೊ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ಗೆ ಆಶ್ಡೆನ್ ಪ್ರಶಸ್ತಿ –2025

ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್‌ ಲಿಮಿಟೆಡ್ ಸಂಸ್ಥೆಗೆ 2025ನೇ ಸಾಲಿನ ಪ್ರತಿಷ್ಠಿತ ಆಶ್ಡೆನ್ ಪ್ರಶಸ್ತಿಯ ಗೌರವ ಸಂದಿದೆ. ಗ್ರೀನ್‌ ಆಸ್ಕರ್‌ ಎಂಬ ಹೆಗ್ಗಳಿಕೆ ಹೊಂದಿರುವ ಈ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ಮೂರನೇ ಬಾರಿ ಮುಡಿಗೇರಿಸಿಕೊಂಡ ಗೌರವ ಸೆಲ್ಕೋ ಸಂಸ್ಥೆಗೆ ಸಲ್ಲುತ್ತಿದೆ. ಇದು 25ನೇ ಆಶ್ಡೆನ್‌ ಪ್ರಶಸ್ತಿಯಾಗಿದ್ದು, ಜೂನ್‌ 11ರಂದು ಲಂಡನ್‌ನ ರಾಯಲ್ ಜಿಯಾಗ್ರಫಿಕಲ್ ಸೊಸೈಟಿಯಲ್ಲಿ ನಡೆದ ಪ್ರತಿಷ್ಠಿತ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಲಿಂಕ್ಡ್‌ ಇನ್‌ ಎಂಟರ್‌ಪ್ರೈಸ್ ಅಕೌಂಟ್‌ ಡೈರೆಕ್ಟರ್‌ ಮತ್ತು ಗೋ ಗ್ರೀನ್‌ ಲೀಡ್‌ನ ಮುಖ್ಯಸ್ಥರಾದ ಕ್ರಿಸ್‌ ಬೆನೆಟ್‌ ಈ ಪ್ರಶಸ್ತಿಯನ್ನು ಸೆಲ್ಕೋ ಸಿಇಒ ಮೋಹನ ಹೆಗಡೆ ಮತ್ತು ಡಿಜಿಎಂ ಸುದೀಪ್ತ ಘೋಷ್‌ ಅವರಿಗೆ ಪ್ರದಾನ ಮಾಡಿದರು. ಗೋ ಗ್ರೀನ್‌ ಇಂಗ್ಲೆಂಡ್‌ನ ಹವಾಮಾನ ರಾಯಭಾರಿ ರಾಚೆಲ್ ಕೈಟ್ ಮತ್ತು ಉಗಾಂಡಾದ ಪರಿಸರವಾದಿ ವನೆಸ್ಸಾ ನಕೇಟ್, ಸೆಲ್ಕೋ ಸಂಸ್ಥೆಯ ಸಾಧನೆಯನ್ನು ಶ್ಲಾಘಿಸಿದರು. 2005 ಮತ್ತು 2007ರಲ್ಲಿಯೂ ಸೆಲ್ಕೋ ಸಂಸ್ಥೆಗೆ ಆಶ್ಡೆನ್‌ ಪ್ರಶಸ್ತಿ ಲಭಿಸಿದ್ದು, 25ನೇ ವರ್ಷದ ಗೌರವವನ್ನೂ ಮುಡಿಗೇರಿಸಿಕೊಂಡ ಸೆಲ್ಕೋ ಸಾಧನೆಯಿಂದಾಗಿ ಭಾರತದ ಪರಿಸರ ಕ್ಷೇತ್ರವೇ ಹೆಮ್ಮೆ ಪಡುವಂತಾಗಿದೆ ಹೇಳಿ ಸೆಲ್ಕೋ ಸುಳ್ಯ ವ್ಯವಸ್ಥಾಪಕ ಆಶಿಕ್ ಬಸವನಪಾದೆ ಅವರು ಹೇಳಿದರು .